ಬೆಂಗಳೂರು: ಕಳೆದ ವಾರ ತಮಿಳುನಾಡಿನ ಕೂನೂರು ಸಮೀಪ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಗ್ರೂಪ್ ಕ್ಯಾಪ್ಟನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಕೆಲವು ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಹೆಮ್ಮೆ, ಶೌರ್ಯ ಮತ್ತು ಉತ್ಕೃಷ್ಟ ವೃತ್ತಿಪರತೆಯೊಂದಿಗೆ ರಾಷ್ಟ್ರದ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ಅತೀವ ದುಃಖವಾಗಿದೆ. ದೇಶಕ್ಕೆ ಅವರ ಸಿರಿವಂತ ಸೇವೆ ಮರೆಯಲಸಾಧ್ಯ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ” ಎಂದಿದ್ದಾರೆ.
Group Captain Varun Singh served the nation with pride, valour and utmost professionalism. I am extremely anguished by his passing away. His rich service to the nation will never be forgotten. Condolences to his family and friends. Om Shanti.
— Narendra Modi (@narendramodi) December 15, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.