ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಏಳು ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡಿದ್ದಾರೆ ಮತ್ತು ನಿರ್ಧಾರ ತೆಗೆದುಕೊಳ್ಳುವಾಗ ಯಾರೂ ಅವರ ಉದ್ದೇಶವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
FICCI ಯ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಮೋದಿ ಸರ್ಕಾರದ ಒಂದು ದೊಡ್ಡ ಸಾಧನೆ ಎಂದರೆ ಅದು ಸ್ವಾತಂತ್ರ್ಯದ ನಂತರದಿಂದ ವಂಚಿತರಾಗಿದ್ದ 60 ಕೋಟಿ ಜನರನ್ನು ದೇಶದ ಅಭಿವೃದ್ಧಿ ಪ್ರಕ್ರಿಯೆಯಡಿ ತಂದಿದೆ ಮತ್ತು ಇದು ಪ್ರಜಾಪ್ರಭುತ್ವದ ಮೇಲೆ ಅವರ ನಂಬಿಕೆಯನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ಹೇಳಿದರು.
“ಕಳೆದ ಏಳು ವರ್ಷಗಳಲ್ಲಿ ಒಂದೇ ಒಂದು ಭ್ರಷ್ಟಾಚಾರದ ನಿದರ್ಶನವಿಲ್ಲ, ನಾವು ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡಿದ್ದೇವೆ, ನಾವು ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ, ಇದರಲ್ಲಿ ಒಂದು ಅಥವಾ ಎರಡು ತಪ್ಪಾಗಿರಬಹುದು. ಆದರೆ ಯಾರೂ, ಇದರಲ್ಲಿ ನಮ್ಮ ಉದ್ದೇಶ ಕೆಟ್ಟದಿತ್ತು ಎಂದು ಹೇಳಲು ಸಾಧ್ಯವಿಲ್ಲ” ಎಂದಿದ್ದಾರೆ.
ಮೋದಿ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಪ್ರಧಾನಿ ಮೋದಿಯವರ ವರ್ಚಸ್ವಿ ನಾಯಕತ್ವ ಮತ್ತು ದೇಶದ 130 ಕೋಟಿ ಜನರ ಭಾಗವಹಿಸುವಿಕೆಯಿಂದಾಗಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದರು.
“ಮೋದಿ ಸರ್ಕಾರದಿಂದ ಮುಟ್ಟದ ಒಂದೇ ಒಂದು ಪ್ರದೇಶವಿಲ್ಲ, ಕಳೆದ ಏಳು ವರ್ಷಗಳಲ್ಲಿ ಭಾರಿ ಬದಲಾವಣೆಗಳಾಗಿವೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.