ನವದೆಹಲಿ: ಭಾರತ ಮತ್ತು ಫ್ರಾನ್ಸ್ ನಡುವಿನ ಮೂರನೇ ವಾರ್ಷಿಕ ರಕ್ಷಣಾ ಸಂವಾದ ನಿನ್ನೆ ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅವರ ಫ್ರೆಂಚ್ ಕೌಂಟರ್ ಫ್ಲಾರೆನ್ಸ್ ಪಾರ್ಲಿ ನಡುವೆ ನಡೆದಿದೆ. ಈ ವಾರ್ಷಿಕ ಸಭೆಯಲ್ಲಿ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ, ಪ್ರಾದೇಶಿಕ, ರಕ್ಷಣಾ ಮತ್ತು ರಕ್ಷಣಾ ಕೈಗಾರಿಕಾ ಸಹಕಾರ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚಿವರುಗಳು ಅಸ್ತಿತ್ವದಲ್ಲಿರುವ ಮಿಲಿಟರಿಯಿಂದ ಮಿಲಿಟರಿ ಸಹಕಾರದ ಬಗ್ಗೆ ಸಭೆಯಲ್ಲಿ ಪರಿಶೀಲಿಸಿದ್ದಾರೆ, ಸಾಂಕ್ರಾಮಿಕದ ಸವಾಲುಗಳ ನಡುವೆಯೂ ವೃದ್ಧಿಸಿದ ಈ ಸಹಕಾರದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಎಲ್ಲಾ ಡೊಮೇನ್ಗಳಲ್ಲಿ ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.
ಭಾರತ ಮತ್ತು ಫ್ರಾನ್ಸ್ ಇತ್ತೀಚೆಗೆ ತಮ್ಮ ವಾರ್ಷಿಕ ದ್ವಿಪಕ್ಷೀಯ ಸೇನಾ ವ್ಯಾಯಾಮ ʼಶಕ್ತಿʼಯನ್ನು ಮುಕ್ತಾಯಗೊಳಿಸಿವೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಮೇಲೆ ಇದು ಕೇಂದ್ರೀಕರಿಸಿದೆ. ಉಭಯ ದೇಶಗಳ ನಡುವಿನ ಭವಿಷ್ಯದ ಸಹಯೋಗಗಳು ಮತ್ತು ಸಹ-ಉತ್ಪಾದನೆಯ ಮೇಲೆ ಕೇಂದ್ರೀಕರಿಸಿದ ರಕ್ಷಣಾ ಕೈಗಾರಿಕಾ ಸಹಕಾರದ ಬಗ್ಗೆ ಕೂಡ ಚರ್ಚಿಸಲಾಗಿದೆ.
ಮಂತ್ರಿಗಳು ಹಲವಾರು ಕಾರ್ಯತಂತ್ರ ಮತ್ತು ರಕ್ಷಣಾ ವಿಷಯಗಳಲ್ಲಿನ ಸಹಮತವನ್ನು ಒಪ್ಪಿಕೊಂಡರು. ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಒಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಫ್ಲಾರೆನ್ಸ್ ಪಾರ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.