ಬೆಳ್ತಂಗಡಿ : ಗುಜರಾತಿನ ನಡಿಯಾಡ್ನಲ್ಲಿರುವ ಅತಿ ಪ್ರಾಚೀನವಾದ 1938ರಲ್ಲಿ ಪ್ರಾರಂಭಗೊಂಡ ಜೆ.ಎಸ್. ಆಯುರ್ವೇದ ಕಾಲೇಜು ಮತ್ತು ಪಿ.ಡಿ. ಪಟೇಲ್ ಆಯುರ್ವೇದ ಆಸ್ಪತ್ರೆಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮಂಗಳವಾರ ವೈದ್ಯ ಸುಂದರಲಾಲ ಜೋಶಿ ಸ್ಮಾರಕ ಪುರಸ್ಕಾರ ನೀಡಿ ಗೌರವಿಸಲಾಗುವುದು. ಆಯುರ್ವೇದ ಚಿಕಿತ್ಸಾ ಪದ್ಧತಿ ಕ್ಷೇತ್ರದಲ್ಲಿ ಶ್ರೀ ಹೆಗ್ಗಡೆಯವರು ಸಲ್ಲಿಸಿದ ಗಣನೀಯ ಸೇವೆಯನ್ನು ಮನ್ನಿಸಿ ಈ ಪುರಸ್ಕಾರ ನೀಡಲಾಗುತ್ತದೆ.
೨೦೦೭ರ ಸೆಪ್ಟೆಂಬರ್ ಒಂದರಂದು ಯಾವುದೇ ಅನುದಾನ ಪಡೆಯದೆ ಸಂಸ್ಥೆಯು ಆರ್ಥಿಕ ಸ್ವಾವಲಂಬನೆಯಿಂದ ಪ್ರಗತಿ ಸಾಧಿಸಲು ನಿರ್ಧರಿಸಿತ್ತು. ಅಂದಿನಿಂದ ಪ್ರತಿವರ್ಷ ಸೆಪ್ಟೆಂಬರ್ 1 ರಂದು ಸ್ವಾವಲಂಬಿ ದಿನವನ್ನಾಗಿ ಸಂಸ್ಥೆಯಲ್ಲಿ ಆಚರಿಸಲಾಗುತ್ತದೆ. ಸಂಸ್ಥೆಯ ಸ್ಥಾಪಕರಾದ ದಿವಂಗತ ವೈದ್ಯ ಸಂದರಲಾಲ್ ಜೋಶಿ ಸ್ಮರಣಾರ್ಥ ಆ ದಿನ ಆಯುರ್ವೇದ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದವರನ್ನು ಗೌರವಿಸಲಾಗುತ್ತದೆ.
ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಎಸ್.ಡಿ.ಎಂ. ಎಜುಕೇಶನ್ ಸೊಸೈಟಿಯ ಆಶ್ರಯದಲ್ಲಿ ಉಡುಪಿ ಮತ್ತು ಹಾಸನದಲ್ಲಿ ಆಯರ್ವೇದ ಕಾಲೇಜು ಮತ್ತು ಆಸ್ಪತ್ರೆ ನಡೆಸಲಾಗುತ್ತದೆ.
ಬೆಂಗಳೂರಿನ ಕೆಂಗೇರಿಯಲ್ಲಿ ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆ ಕಳೆದ 3 ವರ್ಷಗಳಿಂದ ಸೇವೆ ನೀಡುತ್ತಿದ್ದು, 2015-16 ರಲ್ಲಿ 100 ವಿದ್ಯಾರ್ಥಿಗಳ ಸೇರ್ಪಡೆಯೊಂದಿಗೆ ಆಯರ್ವೇದ ಕಾಲೇಜು ಪ್ರಾರಂಭಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.