ನವದೆಹಲಿ: ದೇಶದ ಒಟ್ಟು 3693 ಸ್ಮಾರಕಗಳು ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಥಳಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ನೋಡಿಕೊಳ್ಳುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಇಂದು ಲೋಕಸಭೆಗೆ ತಿಳಿಸಿದರು.
ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, 2016-17 ರಿಂದ 2020-21 ರ ಅವಧಿಯಲ್ಲಿ ಕೇಂದ್ರ ಸಂರಕ್ಷಿತ ಸ್ಮಾರಕಗಳು ಮತ್ತು ಸೈಟ್ಗಳ ಪ್ರವೇಶ ಟಿಕೆಟ್ಗಳ ಮಾರಾಟದಿಂದ ಎಎಸ್ಐ 116640 ಲಕ್ಷ ರೂಪಾಯಿ ಆದಾಯ ಗಳಿಸಿದೆ ಎಂದು ಹೇಳಿದರು.
2020-21ರ ಅವಧಿಯಲ್ಲಿ ದೇಶದ ಐತಿಹಾಸಿಕ ಸ್ಮಾರಕಗಳು ಮತ್ತು ತಾಣಗಳ ನಿರ್ವಹಣೆಗಾಗಿ ಎಎಸ್ಐ 26083 ಲಕ್ಷ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂದು ಸಚಿವರು ಹೇಳಿದರು.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಎಂಬುದು ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿರುವ ಭಾರತೀಯ ಸರ್ಕಾರಿ ಸಂಸ್ಥೆಯಾಗಿದ್ದು, ಇದು ಪುರಾತತ್ತ್ವ ಸಂಶೋಧನೆ ಮತ್ತು ದೇಶದಲ್ಲಿನ ಸಾಂಸ್ಕೃತಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಮೇಲ್ವಿಚಾರಣೆ ಮಾಡುತ್ತದೆ. ಇದನ್ನು 1861 ರಲ್ಲಿ ಅಲೆಕ್ಸಾಂಡರ್ ಕನ್ನಿಂಗ್ಹ್ಯಾಮ್ ಸ್ಥಾಪಿಸಿದ್ದು, ಅವರು ಅದರ ಮೊದಲ ಮಹಾನಿರ್ದೇಶಕರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.