ನವದೆಹಲಿ: ಈಶಾನ್ಯ ರಾಜ್ಯಗಳ ಅಭಿವೃದ್ಧಿಗಾಗಿ ಕಳೆದ ಆರು ವರ್ಷಗಳಲ್ಲಿ ಸುಮಾರು 2 ಲಕ್ಷ 66 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.
ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವ ಜಿ.ಕಿಶನ್ ರೆಡ್ಡಿ ಈ ವಿಷಯ ತಿಳಿಸಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿ ವಾಯು, ರೈಲು, ರಸ್ತೆ, ವಿದ್ಯುತ್, ಜಲಮಾರ್ಗಗಳು ಮತ್ತು ದೂರಸಂಪರ್ಕ ಸಂಪರ್ಕವನ್ನು ಸುಧಾರಿಸಲು ಕೇಂದ್ರ ಸರ್ಕಾರವು ಪ್ರಮುಖ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.
ಈ ಉಪಕ್ರಮಗಳು ಈ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಿವೆ. ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯವು ಸಾಮಾಜಿಕ ಮತ್ತು ಭೌತಿಕ ಮೂಲಸೌಕರ್ಯ ಅಂತರವನ್ನು ನಿವಾರಿಸಲು ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿಯನ್ನು ದೊಡ್ಡ ಪ್ರಮಾಣದಲ್ಲಿ ಮಾಡಲು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.