ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಎಲ್ಒಸಿ ಯಲ್ಲಿ ಕದನ ವಿರಾಮ ಉಲ್ಲಂಘನೆಯ 5,601 ನಿದರ್ಶನಗಳು ವರದಿಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಎರಡು ವರ್ಷಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆಯ ಒಟ್ಟು 5,601 ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರು ಮಾಹಿತಿ ನೀಡಿದ್ದಾರೆ.
ಪಾಕಿಸ್ಥಾನದ ಕದನ ವಿರಾಮ ಉಲ್ಲಂಘನೆಗಳಿಗೆ ಪ್ರತಿಕ್ರಿಯೆ ನೀಡುವಲ್ಲಿ ಫಾರ್ವರ್ಡ್ ಪೋಸ್ಟ್ಗಳಲ್ಲಿ ನಿಯೋಜಿಸಲ್ಪಟ್ಟ ಸೈನಿಕರು ಸಂಪೂರ್ಣ ಸ್ವಾತಂತ್ರ್ಯವನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.
ಭಾರತೀಯ ಸೇನೆಯು ನೀಡಿದ ಪ್ರತ್ಯುತ್ತರದ ಸಂದರ್ಭದಲ್ಲಿ ಪಾಕಿಸ್ತಾನದ ಪೋಸ್ಟ್ಗಳು ಮತ್ತು ಸಿಬ್ಬಂದಿಗೆ ಗಣನೀಯ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತದೊಳಗೆ ಉಗ್ರರನ್ನು ನುಸುಳಿಸುವ ಸಲುವಾಗಿ ಪಾಕಿಸ್ಥಾನವು ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯ ಕೃತ್ಯವನ್ನು ಎಸಗುತ್ತಿದೆ. ಇದಕ್ಕೆ ಭಾರತೀಯ ಯೋಧರು ದಿಟ್ಟ ಉತ್ತರವನ್ನು ನೀಡುತ್ತಾ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.