ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆ ದೂರವಾಣಿ ಸಭಾಷಣೆ ನಡೆಸಿದರು ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.
ಸಂಭಾಷಣೆಯ ಸಂದರ್ಭದಲ್ಲಿ ಮೋದಿ ಮತ್ತುಪುಟಿನ್ ಭಾರತ ಮತ್ತು ರಷ್ಯಾದ ನಡುವಿನ ಸಂಬಂಧ ಸುಧಾರಣೆ ಮತ್ತು ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಗಾಢವಾಗಿಸಲು ನಿರಂತರವಾಗಿ ಶ್ರಮಿಸುವ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.
ಇದಲ್ಲದೇ, ರಷ್ಯಾ ಅಧ್ಯಕ್ಷ ಪುಟಿನ್ ಅವರ ಈ ಹಿಂದಿನ ಭಾರತ ಭೇಟಿಯ ಬಗ್ಗೆಯೂ ಮಾತುಕತೆಯ ಸಂದರ್ಭ ಪ್ರಸ್ತಾಪವಾಗಿದೆ ಎನ್ನಲಾಗಿದೆ.
ಭಾರತದ ಕೈಗಾರಿಕೆಗಳನ್ನು ಪ್ರತಿ ವಲಯದಲ್ಲಿ ವಿಶ್ವದ ಅಗ್ರ ಐದು ಸ್ಥಾನಗಳಲ್ಲಿ ಕಾಣಲು ಸರ್ಕಾರ ಬಯಸಿದೆ ಎಂದು ಈ ವೇಳೆ, ಮೋದಿ ಅವರು ಹೇಳಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ರಕ್ಷಣಾ ಕ್ಷೇತ್ರ, ರಸಗೊಬ್ಬರಗಳ ಪೂರೈಕೆಯಲ್ಲಿ ಸಹಕಾರದ ಬಗ್ಗೆಯೂ ಉಭಯ ನಾಯಕರು ಮಾತನಾಡಿದ್ದಾರೆ. ಅಂತಾರಾಷ್ಟ್ರೀಯ ಸಮಸ್ಯೆಗಳ ಕುರಿತು ಅಭಿಪ್ರಾಯಗಳ ವಿನಿಮಯವಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
Spoke with my friend, President Putin, to follow up on our discussions during his recent visit to India. We agreed on the way forward for enhancing India-Russia cooperation, including in supply of fertilizers. We also discussed recent international developments. @KremlinRussia_E
— Narendra Modi (@narendramodi) December 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.