ಕಾನ್ಪುರ: ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾದ ಲವ್ ಜಿಹಾದ್ ಕಾಯ್ದೆಯಡಿ ಮೊದಲ ಶಿಕ್ಷೆಯನ್ನು ವಿಧಿಸಲಾಗಿದೆ. ಕಾನ್ಪುರ ನ್ಯಾಯಾಲಯ ತೀರ್ಪಿನ ಅನ್ವಯ ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಲಾಗಿದೆ.
2017ರ ಮೇ ತಿಂಗಳಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವಕನಿಗೆ ಶಿಕ್ಷೆ ಘೋಷಣೆಯಾಗಿದೆ.
ಜಾವೇದ್ ಎಂಬ ಮುಸ್ಲಿಂ ಯುವಕ ತನ್ನನ್ನು ಹಿಂದೂ ಎಂದು ಪರಿಚಯಿಸಿಕೊಂಡು ಹಿಂದೂ ಧರ್ಮೀಯ ಅಪ್ರಾಪ್ತ ಬಾಲಕಿಗೆ ಮದುವೆಯಾಗುವ ಭರವಸೆ ನೀಡಿದ್ದ. ನಂತರ ಆಕೆಯನ್ನು ಕರೆದುಕೊಂಡು ಪರಾರಿಯಾಗಿದ್ದ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣವನ್ನು ದಾಖಲಿಸಿ ಮರು ದಿನವೇ ಆತನನ್ನು ಬಂಧನಕ್ಕೆ ಒಳಪಡಿಸಿದರು.
ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋದ ವೇಳೆ ಆಕೆಗೆ ಆತ ಮುಸ್ಲಿಂ ಎಂಬ ಅರಿವಾಯಿತು, ಅಲ್ಲಿ ಆತ ಈಕೆಯನ್ನು ಮತಾಂತರ ಮಾಡಲು ಯತ್ನಿಸಿದ್ದ. ಇದರಿಂದ ಕುಪಿತಗೊಂಡ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಳು. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ಕೂಡ ದಾಖಲಾಗಿದೆ.
ಉತ್ತರ ಪ್ರದೇಶ ಪೊಲೀಸರು ಲವ್ ಜಿಹಾದ್ ನಿಷೇಧ ಕಾಯ್ದೆಯಡಿ ಇದುವರೆಗೆ ಒಟ್ಟು 108 ಪ್ರಕರಣಗಳನ್ನು ದಾಖಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.