ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 28 ರಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರದ 54 ನೇ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣಕ್ಕಾಗಿ ಸಲಹೆಗಳನ್ನು ನೀಡುವಂತೆ ಅವರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ.
ಟ್ವಿಟರ್ ಮೂಲಕ ಸಲಹೆಗಳನ್ನು ಹಂಚಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಆಸಕ್ತರು ತಮ್ಮ ಸಲಹೆಗಳನ್ನು narendramodi.in ನಲ್ಲಿನ ವೇದಿಕೆಯಲ್ಲಿ ಹಂಚಿಕೊಳ್ಳಬಹುದು. ಸಲಹೆಗಳನ್ನು ಕಳುಹಿಸಲು ಡಿಸೆಂಬರ್ 27 ಕೊನೆಯ ದಿನಾಂಕವಾಗಿದೆ.
“ನಾನು ಈ ತಿಂಗಳ 28 ರಂದು ಐಐಟಿ ಕಾನ್ಪುರದ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲು ಎದುರು ನೋಡುತ್ತಿದ್ದೇನೆ. ಇದೊಂದು ಅಮೋಘ ಸಂಸ್ಥೆಯಾಗಿದ್ದು, ವಿಜ್ಞಾನ ಮತ್ತು ನಾವೀನ್ಯತೆಗೆ ಅಪಾರ ಕೊಡುಗೆಯನ್ನು ನೀಡುತ್ತಿದೆ. ಸಲಹೆಗಳನ್ನು ಹಂಚಿಕೊಳ್ಳಲು ನಾನು ಪ್ರತಿಯೊಬ್ಬರನ್ನು ಆಹ್ವಾನಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
I look forward to being at @IITKanpur on the 28th of this month to address the convocation ceremony. This is a vibrant institution, which has made pioneering contributions towards science and innovation.
I invite everyone to share suggestions. https://t.co/obpVCb0NGb
— Narendra Modi (@narendramodi) December 22, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.