ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ 8.7 ಲಕ್ಷಕ್ಕೂ ಹೆಚ್ಚು ಸಕ್ರಿಯ ಎಲೆಕ್ಟ್ರಿಕ್ ವಾಹನಗಳು (ಇವಿಗಳು) ಭಾರತೀಯ ರಸ್ತೆಗಳಲ್ಲಿ ಸಂಚರಿಸುತ್ತಿವೆ ಎಂದು ಸರ್ಕಾರ ಹೇಳಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜಾರ್, “ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದೆ. ಕೇಂದ್ರ ರಸ್ತೆ ಸಾರಗೆ ಮತ್ತು ಹೆದ್ದಾರಿ ಸಚಿವಾಲಯದ ಇ-ವಾಹನ್ ಪೋರ್ಟಲ್ ಪ್ರಕಾರ ಪ್ರಸ್ತುತ 8.12.2021 ರಂತೆ ಭಾರತೀಯ ರಸ್ತೆಗಳಲ್ಲಿ ಸುಮಾರು 8.77 ಲಕ್ಷ ಸಕ್ರಿಯ ಎಲೆಕ್ಟ್ರಿಕ್ ವಾಹನಗಳಿವೆ” ಎಂದಿದ್ದಾರೆ.
ಫೇಮ್-ಇಂಡಿಯಾ ಯೋಜನೆಯ ಹಂತ-II ಅಡಿಯಲ್ಲಿ, ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳ ಖರೀದಿ ಬೆಲೆಯಲ್ಲಿ ಮುಂಗಡ ಕಡಿತದ ರೂಪದಲ್ಲಿ ಪ್ರೋತ್ಸಾಹವನ್ನು ನೀಡಲಾಗುತ್ತದೆ ಎಂದು ಬೃಹತ್ ಕೈಗಾರಿಕೆಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇದಲ್ಲದೆ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಉತ್ತೇಜನಕ್ಕಾಗಿ ಎರಡು ಉತ್ಪಾದನಾ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಗಳನ್ನು ಭಾರೀ ಕೈಗಾರಿಕೆಗಳ ಸಚಿವಾಲಯವು ಜಾರಿಗೊಳಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.