ನವದೆಹಲಿ: ಆಗಸ್ಟ್ 2019 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.
ಭಯೋತ್ಪಾದಕ ಘಟನೆಗಳು ಗಣನೀಯವಾಗಿ ಇಳಿಮುಖವಾಗಿದ್ದು, ಗಡಿಯಾಚೆಯಿಂದ ಭಯೋತ್ಪಾದಕರ ಒಳನುಸುಳುವಿಕೆ ಕಡಿಮೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ರಾಯ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳ ಸಂಖ್ಯೆಯು 2018 ರಲ್ಲಿ ಇದ್ದ 417 ರಿಂದ ಪ್ರಸ್ತುತ 203 ಕ್ಕೆ ಇಳಿದಿದೆ ಮತ್ತು ಒಳನುಸುಳುವಿಕೆ ಕೂಡ ಕಡಿಮೆಯಾಗಿದೆ. 2018 ರಲ್ಲಿ ಇದ್ದ 143 ರಿಂದ ಈ ವರ್ಷದ ಅಕ್ಟೋಬರ್ 31 ರವರೆಗೆ 28ಕ್ಕೆ ಇಳಿಕೆಯಾಗಿದೆ ಎಂದಿದ್ದಾರೆ.
ಭಯೋತ್ಪಾದಕರ ವಿರುದ್ಧ ಪೂರ್ವಭಾವಿ ಕಾರ್ಯಾಚರಣೆಗಳ ಜೊತೆಗೆ ಸರ್ಕಾರವು ದೃಢವಾದ ಭದ್ರತೆ ಮತ್ತು ಗುಪ್ತಚರ ಗ್ರಿಡ್ ಅನ್ನು ಸ್ಥಾಪಿಸಿದೆ ಎಂದು ಸಚಿವರು ಹೇಳಿದ್ದಾರೆ.
ಯಾವುದೇ ಕಾಶ್ಮೀರಿ ಪಂಡಿತರು ಕಣಿವೆಯಲ್ಲಿ ನೆಲೆಸಲು ಎಲ್ಲಿಯೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಸಚಿವರು ಹೇಳಿದ್ದಾರೆ.
2015 ರ ಪ್ರಧಾನ ಮಂತ್ರಿಗಳ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ನೇಮಕಗೊಂಡ 1678 ಸರ್ಕಾರಿ ನೌಕರರು ಕಣಿವೆಯಲ್ಲಿ ತಮ್ಮ ಕರ್ತವ್ಯಕ್ಕೆ ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.