ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮಕೈಗೊಳ್ಳದೆ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಇಲಾಖೆ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು.
ಬೆಳಗಾವಿಯಲ್ಲಿಂದು ಅಬಕಾರಿ ಇಲಾಖೆಯ ಬೆಳಗಾವಿ ಉತ್ತರ ಕನ್ನಡ, ಹೊಸಪೇಟೆ ಕಲಬುರ್ಗಿ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇದೀಗ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಕ್ರಮ ಮದ್ಯ ಮಾರಾಟ ತಡೆ ಸಂಬಂಧ ಸದನಕ್ಕೆ ನಾನು ಭರವಸೆ ನೀಡಿದ್ದೇನೆ. ಅದರಂತೆ ನೀವು ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲವಾದರೆ ನಿಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಈ ವಿಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಬಹಳಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಹಾಗು ಹೊರ ರಾಜ್ಯಗಳಿಂದ ಅಕ್ರಮವಾಗಿ ಮದ್ಯ ಸರಬರಾಜು ಆಗುತ್ತಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ತಿಳಿಸಿದರು.
ನಾನು ಈ ಭಾಗದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿ ಅವರಿಂದ ಮಾಹಿತಿ ಪಡೆದುಕೊಂಡು ಜಿಲ್ಲೆಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಅಬಕಾರಿ ಇಲಾಖೆ ಆಯುಕ್ತರಾದ ರವಿಶಂಕರ್, ಅಬಕಾರಿ ಅಪರ ಆಯುಕ್ತರಾದ ವೈ. ಮಂಜುನಾಥ್ ಮತ್ತು ಸಂಬಂಧಪಟ್ಟ ಜಿಲ್ಲೆಗಳ ಅಬಕಾರಿ ಉಪ ಆಯುಕ್ತರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.