ಹುಬ್ಬಳ್ಳಿ :ಸಮುತ್ಕರ್ಷ ಐಎಎಸ್ ಕರ್ನಾಟಕ ವತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗಾಗಿ ಜನವರಿ 1 ರಿಂದ ಹುಬ್ಬಳ್ಳಿಯಲ್ಲಿ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿಯನ್ನು ವಿದ್ಯಾ ನಗರದ ಕೆಎಲ್ಇ ಟೆಕ್ ಯೂನಿವರ್ಸಿಟಿ ಕ್ಯಾಂಪಸ್ ನಲ್ಲಿ ಆರಂಭಿಸುತ್ತಿದ್ದೇವೆ ಎಂದು ಸಮುತ್ಕರ್ಷ ಟ್ರಸ್ಟ್ ಡೈರೆಕ್ಟರ್ ಜನರಲ್ ಜಿತೇಂದ್ರ ನಾಯಕ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ ನಡೆಯಲಿದೆ. ದೆಹಲಿಯ ನುರಿತ ತರಬೇತಿದಾರರಿಂದ ಮತ್ತು ಹಿರಿಯ ಅಧಿಕಾರಗಳ ವಿಶೇಷ ತರಗತಿಗಳು ಹಾಗೂ ಸಂವಾದ ಕಾರ್ಯಕ್ರಮವನ್ನು ಆಯೋಜಿಸುತ್ತಾ ಅಧ್ಯಯನ ಕೇಂದ್ರವನ್ನು ಅತಿ ಕಡಿಮೆ ಖರ್ಚಿನಲ್ಲಿ ತರಬೇತಿ ನಡೆಯಲಿದೆ ಎಂದರು.
ದೆಹಲಿಯ ಸಂಕಲ್ಪದ ಸಹಯೋಗದೊಂದಿಗೆ ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಿದೆ.
ಆಸಕ್ತ ಅಭ್ಯರ್ಥಿಗಳು ಇದೇ ಡಿ. 31 ರ ಒಳಗಾಗಿ ದೂ. 96634 24767 ಗೆ ಸಂಪರ್ಕಿಸಬಹುದು ಎಂದು ಜಿತೇ೦ದ್ರ ನಾಯಕ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಸದಸ್ಯ ಅಚ್ಯುತ್ ಲಿಮಯೆ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.