ನವದೆಹಲಿ: ಲುಧಿಯಾನ ನ್ಯಾಯಾಲಯದ ಆವರಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣವನ್ನು ಭೇದಿಸಲು ನಮ್ಮ ಸರ್ಕಾರವು ಕೇಂದ್ರದ ಬೆಂಬಲವನ್ನು ಕೋರಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಹೇಳಿದ್ದಾರೆ.
ಸ್ಫೋಟ ಸಂಭವಿಸಿದ ಗಂಟೆಗಳ ನಂತರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಕರಣದ ತನಿಖೆಗಾಗಿ ಕೇಂದ್ರವು ಪಂಜಾಬ್ಗೆ ತಂಡಗಳನ್ನು ರವಾನಿಸಿದೆ ಎಂದು ಚನ್ನಿ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 23 ರಂದು ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.
ಎರಡನೇ ಮಹಡಿಯ ಶೌಚಾಲಯದಲ್ಲಿ ನಡೆದ ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿ ಸ್ಫೋಟಕ ಸಾಧನವನ್ನು ಜೋಡಿಸಲು ಅಥವಾ ಇಡಲು ಪ್ರಯತ್ನಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.
ಗುಪ್ತಚರ ವೈಫಲ್ಯವನ್ನು ನಿರಾಕರಿಸಿದ ಮುಖ್ಯಮಂತ್ರಿ, “ಅಂತಹದ್ದೇನೂ ಇಲ್ಲ. ನಾವು ಜಾಗರೂಕರಾಗಿದ್ದೇವೆ” ಎಂದಿದ್ದಾರೆ. ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನವಾಗಿರಬಹುದು ಎಂದು ಅವರು ಶಂಕಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.