ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, ದೇಶದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಕೊರೋನಾ ಲಸಿಕೆ ವಿತರಣೆ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ.
ಕರ್ನಾಟಕದಲ್ಲಿ 96.76% ಮಂದಿಗೆ ಮೊದಲ ಮತ್ತು 75.25% ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಇದುವರೆಗೆ ರಾಜ್ಯದಲ್ಲಿ 8.41 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.
ಅತ್ಯಧಿಕ ಸಂಖ್ಯೆಯಲ್ಲಿ ಲಸಿಕೆ ವಿತರಣೆ ಮಾಡಿದ ರಾಜ್ಯಗಳಲ್ಲಿ ಆಂಧ್ರಪ್ರದೇಶ ಮೊದಲ ಸ್ಥಾನ ಪಡೆದುಕೊಂಡಿದೆ. ಅಲ್ಲಿ 3.89 ಕೋಟಿ ಮೊದಲ ಡೋಸ್ ಮತ್ತು 2.80 ಕೋಟಿ ಎರಡನೇ ದೋಸ್ತ್ ಲಸಿಕೆಯನ್ನು ನೀಡಲಾಗಿದೆ.
ಮೂರನೇ ಸ್ಥಾನದಲ್ಲಿ ಗುಜರಾತ್, ನಾಲ್ಕನೇ ಸ್ಥಾನದಲ್ಲಿ ಮಧ್ಯಪ್ರದೇಶ, ಐದನೇ ಸ್ಥಾನದಲ್ಲಿ ಪಶ್ಚಿಮಬಂಗಾಳ, ಆರನೇ ಸ್ಥಾನದಲ್ಲಿ ರಾಜಸ್ಥಾನ, ಏಳನೇ ಸ್ಥಾನದಲ್ಲಿ ಮಹಾರಾಷ್ಟ್ರ, ಎಂಟನೇ ಸ್ಥಾನದಲ್ಲಿ ತಮಿಳುನಾಡು, 9ನೇ ಸ್ಥಾನದಲ್ಲಿ ಉತ್ತರಪ್ರದೇಶ, ಹತ್ತನೇ ಸ್ಥಾನದಲ್ಲಿ ಬಿಹಾರ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.