ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 5ನೇ ವರ್ಷದ ಮಂಗಳೂರು ಕಂಬಳ ಜನವರಿ 22 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ ಡಿಸೆಂಬರ್ 23 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕರೆ ನೀಡಿದರು.
ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಕ್ಯಾಪ್ಟನ್ ಬೃಜೇಶ್ ಚೌಟ ಮಾತನಾಡಿ, ಮಂಗಳೂರು ಕಂಬಳ 5ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಹಿಂದಿಗಿಂತಲೂ ಹೆಚ್ಚು ವಿಜೃಂಭಣೆಯಿಂದ ಕಂಬಳ ಕೂಟವನ್ನು ಆಯೋಜಿಸುವುದು ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಮತ್ತು ಭಾರತ-ಪಾಕಿಸ್ತಾನ ಯುದ್ಧದ ವಿಜಯದ ಸುವರ್ಣ ಮಹೋತ್ಸವವನ್ನು ಕಂಬಳದ ಜೊತೆ ಆಚರಿಸುವ ನಿಟ್ಟಿನಲ್ಲಿ ಸಲಹೆ-ಸೂಚನೆಗಳನ್ನು ಪಡೆಯಲಾಯಿತು.
ಸಭೆಯಲ್ಲಿ ಭಾರತ ಸರಕಾರದ ಅಲೆಮಾರಿ ಅಭಿವೃದ್ಧಿ ಸಮಿತಿ ಸದಸ್ಯರಾದ ಭಾಸ್ಕರ್ ದಾಸ್ ಎಕ್ಕಾರು, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಭರತ್ ಸೂಟರ್ ಪೇಟೆ, ಮನೋಜ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ, ಸುಧಾಕರ ಶೆಟ್ಟಿ ಮುಗೆರೋಡಿ, ಮಂಗಳೂರು ಕಮಲ ಸಮಿತಿಯ ಸುಜಿತ್ ಪ್ರತಾಪ್, ಸಚಿನ್ ಶೆಟ್ಟಿ, ಪ್ರೀತಮ್ ರೈ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.