ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ. ಪೊಲೀಸರ ಪ್ರಕಾರ, ಶೋಪಿಯಾನ್ನ ಚೌಗಾಮ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು.
“ಇಬ್ಬರು ಅಪರಿಚಿತ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ. ಶೋಧ ನಡೆಯುತ್ತಿದೆ” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಅರ್ವಾನಿ ಪ್ರದೇಶದ ಮುಮನ್ಹಾಲ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿತ್ತು.ಹತನಾದ ಉಗ್ರನನ್ನು ಕುಲ್ಗಾಮ್ನ ಸೆಹ್ಪೋರಾ ನಿವಾಸಿ ಶಹಜಾದ್ ಅಹ್ಮದ್ ಸೆಹ್ ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷದ ಸೆಪ್ಟೆಂಬರ್ನಿಂದ ಭಯೋತ್ಪಾದಕ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದುಬಂದಿದೆ.ಕಾರ್ಯಾಚರಣೆ ವೇಳೆ ಶಹಜಾದ್ ಬಳಿಯಿದ್ದ ಎಕೆ-47 ರೈಫಲ್, ಎರಡು ಮ್ಯಾಗಜೀನ್ಗಳು, 40 ಎಕೆ ರೌಂಡ್ಗಳು ಮತ್ತು ಗ್ರೆನೇಡ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
#ShopianEncounterUpdate: 02 unidentified #terrorists killed. Incriminating materials including #arms & ammunition recovered. Search going on. Further details shall follow. @JmuKmrPolice https://t.co/87Co15gdvX
— Kashmir Zone Police (@KashmirPolice) December 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.