ಬೆಂಗಳೂರು: ಜನವರಿ 1 ರಿಂದ ಫೆಬ್ರವರಿ 7ರವರೆಗೆ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸೂರ್ಯನಮಸ್ಕಾರ ಕಾರ್ಯಕ್ರಮ ಆಯೋಜನೆ ಮಾಡುವಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಯ ಮುಖ್ಯಸ್ಥರಿಗೆ ಪತ್ರವನ್ನು ಬರೆದಿದೆ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಸೂಚನೆಯನ್ನು ಹೊರಡಿಸಿದ್ದು, ಇದರ ಅನ್ವಯ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜನವರಿ 26ರಂದು ಮ್ಯೂಸಿಕಲ್ ಪರ್ಫಾರ್ಮೆನ್ಸ್ ಆನ್ ಸೂರ್ಯನಮಸ್ಕಾರ ನಡೆಯಲಿದೆ ಎಂದೂ ಹೇಳಲಾಗಿದೆ.
ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯೋಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಶೈಕ್ಷಣಿಕ ಸಂಸ್ಥೆಗಳಿಂದಲೇ ಯೋಗಕ್ಕೆ ಉತ್ತೇಜಿನ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜನೆಗೆ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.