ವದೆಹಲಿ: ಸ್ಥಳೀಯ ಭಾಷೆಗಳು ಮತ್ತು ಮಾತೃಭಾಷೆಯಲ್ಲಿ ಎಂಜಿನಿಯರಿಂಗ್ ಶಿಕ್ಷಣವು ಯುವಕರ ಸಬಲೀಕರಣದ ಸಾಧನವಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
ಸೋಮವಾರ ನವದೆಹಲಿಯಲ್ಲಿ ನಡೆದ 36ನೇ ಇಂಡಿಯಾ ಇಂಜಿನಿಯರಿಂಗ್ ಕಾಂಗ್ರೆಸ್ನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ್, ಭಾರತವು ವೈಜ್ಞಾನಿಕ ಮನೋಭಾವ ಮತ್ತು ದೃಢವಾದ ಎಂಜಿನಿಯರಿಂಗ್ ಸಾಮರ್ಥ್ಯ ಹೊಂದಿರುವ ಜನರ ದೇಶವಾಗಿದೆ. ನಮ್ಮ ನಾಗರಿಕತೆಯ ಇತಿಹಾಸವು ಸ್ಟ್ರಕ್ಚರಲ್ ಇಂಜಿನಿಯರಿಂಗ್, ವಾಟರ್ ಮ್ಯಾನೇಜ್ಮೆಂಟ್ ಮತ್ತು ಮ್ಯಾರಿಟೈಮ್ ಎಂಜಿನಿಯರಿಂಗ್ನ ವೈಜ್ಞಾನಿಕ ಪುರಾವೆಗಳನ್ನು ಹೊಂದಿದೆ ಎಂದು ಅವರು ಹೇಳಿದರು.
ಎಂಜಿನಿಯರಿಂಗ್ ಶಿಕ್ಷಣವನ್ನು ಪದವಿಗಳನ್ನು ನೀಡುವುದಕ್ಕೆ ಸೀಮಿತಗೊಳಿಸಬಾರದು, ಆದರೆ ಕಲಿಕೆಯ ಪ್ರಕ್ರಿಯೆಯಲ್ಲಿ ಭಾಷಾ ಅಡೆತಡೆಗಳನ್ನು ತೆಗೆದುಹಾಕಲು ಮತ್ತು ನಮ್ಮ ಎಂಜಿನಿಯರಿಂಗ್ ಸಮುದಾಯದ ಸಾಮರ್ಥ್ಯವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಚಿವರು ಒತ್ತಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.