ನವದೆಹಲಿ: ವಿಕ್ರಮ್ ಮಿಸ್ರಿ ಅವರನ್ನು ರಾಷ್ಟ್ರೀಯ ಭದ್ರತಾ ಮಂಡಳಿಯ ಸೆಕ್ರೆಟರಿಯೇಟ್ನಲ್ಲಿ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ವಿದೇಶಿ ಸೇವೆಗಳ ಅಧಿಕಾರಿಯಾಗಿರುವ ಅವರು ಡಿಸೆಂಬರ್ 11 ರವರೆಗೆ ಚೀನಾಕ್ಕೆ ರಾಯಭಾರಿಯಾಗಿ ಸೇವೆ ಸಲ್ಲಿಸಿದರು.
ಪ್ರದೀಪ್ ಕುಮಾರ್ ರಾವತ್ ಅವರ ಉತ್ತರಾಧಿಕಾರಿಯಾಗಿ ಮಿಸ್ರಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಭಾರತೀಯ ವಿದೇಶಾಂಗ ಸೇವೆಯ 1989 ರ ಬ್ಯಾಚ್ನ ಅಧಿಕಾರಿಯಾಗಿರುವ ವಿಕ್ರಮ್ ಮಿಸ್ರಿ ಅವರು ಮ್ಯಾನ್ಮಾರ್ ಮತ್ತು ಸ್ಪೇನ್ಗೆ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2019 ರಲ್ಲಿ, ಅವರು ಚೀನಾಗೆ ರಾಯಭಾರಿಯಾಗಿ ನೇಮಕಗೊಂಡರು ಮತ್ತು ಇಂಡೋ-ಚೀನಾ ಸಂಬಂಧಗಳಲ್ಲಿ ನಿರ್ಣಾಯಕ ಅವಧಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಪಡೆಗಳು ಹಿಂಸಾತ್ಮಕವಾಗಿ ಘರ್ಷಣೆಯಲ್ಲಿ ತೊಡಗಿದ ನಂತರ ಚೀನಾದೊಂದಿಗೆ ನಡೆದ ಹಲವಾರು ಮಾತುಕತೆಗಳ ಭಾಗವಾಗಿ ಮಿಸ್ರಿ ಇದ್ದರು.
ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ, ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಮತ್ತು ಯುರೋಪ್, ಆಫ್ರಿಕಾ, ಏಷ್ಯಾ ಮತ್ತು ಉತ್ತರ ಅಮೇರಿಕಾದಲ್ಲಿ ಹಲವಾರು ಭಾರತೀಯ ಮಿಷನ್ಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಅವರು 2012 ರಿಂದ 2014 ರವರೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಖಾಸಗಿ ಕಾರ್ಯದರ್ಶಿಯಾಗಿದ್ದರು ಮತ್ತು 2014 ರಲ್ಲಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡಾಗಲೂ ಅದೇ ಹುದ್ದೆಯಲ್ಲಿ ಮುಂದುವರೆದರು. ಮೇ ನಿಂದ ಜುಲೈ 2014 ರವರೆಗೆ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
1997 ರಲ್ಲಿ ಆಗಿನ ಪ್ರಧಾನಿ ಇಂದರ್ ಕುಮಾರ್ ಗುಜ್ರಾಲ್ ಅವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀನಗರದಲ್ಲಿ ಜನಿಸಿದ ವಿಕ್ರಮ್ ಮಿಸ್ರಿ ಅವರು ದೆಹಲಿಯ ಹಿಂದೂ ಕಾಲೇಜಿನಲ್ಲಿ ಪದವಿ ಪಡೆಯುವ ಮೊದಲು ಸಿಂಧಿಯಾ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಎಂಬಿಎ ಪದವಿಯನ್ನೂ ಪಡೆದಿದ್ದಾರೆ. ನಾಗರಿಕ ಸೇವೆಗೆ ಸೇರುವ ಮೊದಲು, ಅವರು ಮೂರು ವರ್ಷಗಳ ಕಾಲ ಜಾಹೀರಾತು ಮತ್ತು ಚಲನಚಿತ್ರ ತಯಾರಿಕೆಯಲ್ಲಿ ಕೆಲಸ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.