ನವದೆಹಲಿ: ಭಾರತದಲ್ಲಿ ಮತ್ತೆ ಮೂರು ಲಸಿಕೆಗಳು ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿದೆ. ಕೇಂದ್ರ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತುರ್ತು ಸಂದರ್ಭಗಳಲ್ಲಿ ನಿರ್ಬಂಧಿತ ಬಳಕೆಗಾಗಿ ಕಾರ್ಬೆವ್ಯಾಕ್ಸ್, ಕೊವೊವ್ಯಾಕ್ಸ್ ಮತ್ತು ಆ್ಯಂಟಿವೈರಲ್ ಡ್ರಗ್ ಮೊಲ್ನುಪಿರಾವಿರ್ಗೆ ಅನುಮೋದನೆ ನೀಡಿದೆ.
ಟ್ವೀಟ್ಗಳ ಸರಣಿಯಲ್ಲಿ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಕೋವಿಡ್-19 ವಿರುದ್ಧ ಕಾರ್ಬೆವಾಕ್ಸ್ ಲಸಿಕೆ ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ RBD ಪ್ರೋಟೀನ್ ಉಪ-ಘಟಕ ಲಸಿಕೆಯಾಗಿದೆ, ಇದನ್ನು ಹೈದರಾಬಾದ್ ಮೂಲದ ಸಂಸ್ಥೆ ಬಯೋಲಾಜಿಕಲ್-ಇ ತಯಾರಿಸಿದೆ. ಇದು ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಮೂರನೇ ಲಸಿಕೆಯಾಗಿದೆ ಎಂದಿದ್ದಾರೆ.
ನ್ಯಾನೊಪರ್ಟಿಕಲ್ ಲಸಿಕೆ ಕೋವೊವ್ಯಾಕ್ಸ್, ಪುಣೆ ಮೂಲದ ಸಂಸ್ಥೆಯಾದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಡುತ್ತದೆ.
ಕೋವಿಡ್-19 ಹೊಂದಿರುವ ವಯಸ್ಕ ರೋಗಿಗಳ ಚಿಕಿತ್ಸೆಗಾಗಿ ಮತ್ತು ರೋಗದ ಪ್ರಗತಿಯ ಹೆಚ್ಚಿನ ಅಪಾಯವನ್ನು ಹೊಂದಿರುವ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗಾಗಿ ಮೊಲ್ನುಪಿರವಿರ್ ಅನ್ನು ಈಗ ದೇಶದಲ್ಲಿ 13 ಕಂಪನಿಗಳು ತಯಾರಿಸುತ್ತವೆ ಎಂದು ಮಾಂಡವಿಯಾ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ವಿರುದ್ಧದ ಯುದ್ಧವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ್ದಾರೆ ಮತ್ತು ಈ ಎಲ್ಲಾ ಅನುಮೋದನೆಗಳು ಸಾಂಕ್ರಾಮಿಕ ರೋಗದ ವಿರುದ್ಧದ ಜಾಗತಿಕ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮಾಂಡವೀಯ ಹೇಳಿದ್ದಾರೆ.
Congratulations India 🇮🇳
Further strengthening the fight against COVID-19, CDSCO, @MoHFW_INDIA has given 3 approvals in a single day for:
– CORBEVAX vaccine
– COVOVAX vaccine
– Anti-viral drug MolnupiravirFor restricted use in emergency situation. (1/5)
— Dr Mansukh Mandaviya (@mansukhmandviya) December 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.