ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ನಿರ್ಮಿಸಿದ 27 ಮೂಲಭೂತ ಯೋಜನೆಗಳ ಇ-ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, BRO ಕಾರ್ಯವನ್ನು ಶ್ಲಾಘಿಸಿದರು. ಅದರ ರಸ್ತೆಗಳು, ಸುರಂಗಗಳು ಮತ್ತು ಸೇತುವೆಗಳು ಇಂದು ಸ್ಥಳಗಳ ನಡುವಿನ ಅಂತರ ಮತ್ತು ಸಮಯವನ್ನು ಕಡಿಮೆ ಮಾಡಿದೆ. ದೂರದ ಪ್ರದೇಶಗಳಲ್ಲಿ ರಸ್ತೆಗಳು, ಸುರಂಗಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ಮಿಸುವ ಮೂಲಕ ರಾಷ್ಟ್ರದ ಪ್ರಗತಿಯಲ್ಲಿ ಬಿಆರ್ಒ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ಕಳೆದ ಆರು-ಏಳು ವರ್ಷಗಳಲ್ಲಿ ಬಿಆರ್ಒ ಮಾಡಿರುವ ಸಾಧನೆಗಳು ಅಭೂತಪೂರ್ವ ಎಂದು ಸಚಿವರು ಬಣ್ಣಿಸಿದರು. ಗಡಿ ಭಾಗಗಳ ಅಭಿವೃದ್ಧಿಗೆ ಕೆಲವು ವಿಶೇಷ ಅಗತ್ಯಗಳಿದ್ದು, ಈ ನಿಟ್ಟಿನಲ್ಲಿ ಸರ್ಕಾರ ನೆತಳಮಟ್ಟದಲ್ಲಿ ಕೆಲಸ ಮಾಡಿದೆ ಎಂದರು.
ಈ ಹಿಂದೆ ಉತ್ತರ ವಲಯದಲ್ಲಿ ದೇಶವು ಎದುರಿಸಬೇಕಾಗಿದ್ದ ಸನ್ನಿವೇಶಗಳು ಕಠಿಣವಾಗಿದ್ದವು ಮತ್ತು ಸರಿಯಾದ ಮೂಲಸೌಕರ್ಯ ಅಭಿವೃದ್ಧಿ ಇಲ್ಲದೆ ಎದುರಾಳಿಯನ್ನು ಬಲವಾಗಿ ಎದುರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಂಗ್ ಹೇಳಿದ್ದಾರೆ
ದಕ್ಷಿಣ ಲಡಾಖ್ನ ಉಮ್ಲಿಂಗ್-ಲಾ ಪಾಸ್ನಲ್ಲಿ 19,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ರಸ್ತೆ ಈಗ ವಿಶ್ವದ ಅತಿ ಎತ್ತರದ ಮೋಟಾರು ರಸ್ತೆಯಾಗಿದೆ ಎಂದ ಅವರು, ಈ ರಸ್ತೆಯಿಂದ ಸಶಸ್ತ್ರ ಪಡೆಗಳ ತ್ವರಿತ ರವಾನೆಗೆ ಅನುಕೂಲವಾಗುವುದು ಮಾತ್ರವಲ್ಲದೆ ಈ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.