ಫರೂಕಾಬಾದ್: ಕಾಂಗ್ರೆಸ್ ಭಯೋತ್ಪಾದಕರನ್ನು ಪೋಷಿಸುತ್ತಿತ್ತು ಮತ್ತು ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಹಿಂದೂ ಮುಖಂಡರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿತ್ತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಆರೋಪಿಸಿದ್ದಾರೆ.
“ನೀವು ಮಹಾರಾಷ್ಟ್ರ ಎಟಿಎಸ್ ಹೇಳಿಕೆಯನ್ನು ಕೇಳಿರಬೇಕು. ಆ ಸಮಯದಲ್ಲಿ ಅವರು ಬಿಜೆಪಿ, ಆರೆಸ್ಸೆಸ್ ನಾಯಕರು ಮತ್ತು ಹಿಂದೂ ಮುಖಂಡರ ಮೇಲೆ ಹೇಗೆ ಸುಳ್ಳು ಪ್ರಕರಣಗಳನ್ನು ಹಾಕುತ್ತಿದ್ದರು ಎಂಬುದನ್ನು ನೀವು ನೋಡಿರಬೇಕು” ಎಂದು ಆದಿತ್ಯನಾಥ್ ಹೇಳಿದ್ದಾರೆ.
2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಅವರು ಮಾಡಿದ ಪಿತೂರಿಯನ್ನು ನೀವು ನೋಡಿರಬೇಕು, ಈ ಕೃತ್ಯ ಮಾಡಿದ್ದಕ್ಕಾಗಿ ಈ ದೇಶದ ಜನರಲ್ಲಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.
“ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಯೋತ್ಪಾದಕರನ್ನು ಪೋಷಿಸುತ್ತಿದ್ದರು. ಈಗ ವಿರೋಧ ಪಕ್ಷದಲ್ಲಿದ್ದಾಗ ಈ ದೇಶದ ಜನರ ಅಭಿವೃದ್ಧಿಗಾಗಿ ಮಾಡಿದ ಕೆಲಸಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ” ಎಂದು ಅವರು ಹೇಳಿದರು.
2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ 15 ನೇ ಸಾಕ್ಷಿಯು ಪ್ರಕರಣದಲ್ಲಿ ಯೋಗಿ ಆದಿತ್ಯನಾಥ್ ಮತ್ತು ಆರ್ಎಸ್ಎಸ್ ನಾಯಕರ ಹೆಸರು ಹೇಳುವಂತೆ ಎಟಿಎಸ್ ಒತ್ತಡ ಹಾಕಿತ್ತು ಎಂದು ಹೇಳಿದ ಹಿನ್ನೆಲೆಯಲ್ಲಿ ಯುಪಿ ಮುಖ್ಯಮಂತ್ರಿಯ ಈ ಹೇಳಿಕೆ ಬಂದಿದೆ.
ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.