ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡು ಎನ್ಕೌಂಟರ್ಗಳಲ್ಲಿ ಇಬ್ಬರು ಪಾಕಿಸ್ಥಾನಿ ಪ್ರಜೆಗಳು ಸೇರಿದಂತೆ ಆರು ಜೆಇಎಂ ಭಯೋತ್ಪಾದಕರು ಹತರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ವಿಭಿನ್ನ ಎನ್ಕೌಂಟರ್ಗಳಲ್ಲಿ ಆರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.
ಪೊಲೀಸ್ ವಕ್ತಾರರ ಪ್ರಕಾರ, ನಿನ್ನೆ ಸಂಜೆ ಭದ್ರತಾ ಪಡೆಗಳು ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಸಂಭವಿಸಿದೆ ಮತ್ತು ಅಡಗಿಕೊಂಡಿದ್ದ ಭಯೋತ್ಪಾದಕರಿಂದ ಭಾರೀ ಗುಂಡಿನ ದಾಳಿ ನಡೆದಿದೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಗುಂಡಿನ ದಾಳಿಯಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರು ಮತ್ತು ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕರು ಜೈಷ್-ಎ-ಮುಹಮ್ಮದ್ (ಜೆಇಎಂ) ಉಗ್ರಗಾಮಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ. ಎನ್ಕೌಂಟರ್ ಸ್ಥಳದಿಂದ ಒಂದು ಎಂ4 ಮತ್ತು ಎರಡು ಎಕೆ 47 ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಿನ್ನೆ ಸಂಜೆ ಅನಂತ್ನಾಗ್ ಜಿಲ್ಲೆಯ ನೌಗಾಮ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಇನ್ನೂ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಗುಂಡಿನ ಚಕಮಕಿ ವೇಳೆ ಓರ್ವ ಪೊಲೀಸ್ ಪೇದೆಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭಯೋತ್ಪಾದಕರು ಜೆಎಂ ಸಂಘಟನೆಗೆ ಸೇರಿದವನು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ (ಕಾಶ್ಮೀರ ವಲಯ) ವಿಜಯ್ ಕುಮಾರ್ ಅವರು ಕಾರ್ಯಾಚರಣೆಯನ್ನು ದೊಡ್ಡ ಯಶಸ್ಸು ಎಂದು ಬಣ್ಣಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.