ನವದೆಹಲಿ: ಝಾನ್ಸಿ ರೈಲು ನಿಲ್ದಾಣಕ್ಕೆ ವೀರಾಂಗಣ ಲಕ್ಷ್ಮೀಬಾಯಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ.
ಉತ್ತರ ಪ್ರದೇಶ ಸರ್ಕಾರ ಬುಧವಾರ ಝಾನ್ಸಿ ರೈಲು ನಿಲ್ದಾಣವನ್ನು ವೀರಾಂಗಣ ಲಕ್ಷ್ಮೀಬಾಯಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲು ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಝಾನ್ಸಿ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸುವ ಪ್ರಸ್ತಾವನೆಯನ್ನು ಕೇಂದ್ರ ಒಪ್ಪಿಕೊಂಡಿತ್ತು.
ಕೆಲ ವರ್ಷಗಳ ಹಿಂದೆ ನಗರದಲ್ಲಿ ನಡೆದ ರೈಲ್ವೆ ಸಭೆಯಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ಪ್ರಭಾತ್ ಝಾ ಸೇರಿದಂತೆ ಹಲವು ಸ್ಥಳೀಯ ಜನಪ್ರತಿನಿಧಿಗಳು ಝಾನ್ಸಿ ನಿಲ್ದಾಣಕ್ಕೆ ರಾಣಿ ಲಕ್ಷ್ಮೀಬಾಯಿ ಹೆಸರಿಡುವಂತೆ ಒತ್ತಾಯಿಸಿದ್ದರು.
ಝಾನ್ಸಿ ಸಂಸದ ಅನುರಾಗ್ ಶರ್ಮಾ ಮಾತನಾಡಿ, ಇದು ಬುಂದೇಲ್ಖಂಡದ ಜನತೆಗೆ ಹೆಮ್ಮೆಯ ವಿಷಯವಾಗಿದೆ, ಇದು ಈ ಪ್ರದೇಶಕ್ಕೆ ಆರ್ಥಿಕ ಲಾಭವನ್ನು ನೀಡುತ್ತದೆ ಎಂದು ಹೇಳಿದರು. ಇಲ್ಲಿ ಪ್ರವಾಸೋದ್ಯಮದ ಸಾಧ್ಯತೆಗಳು ಹೆಚ್ಚಾಗಲಿವೆ ಎಂದರು.
ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ನಂತರ, ಹಲವಾರು ಸ್ಥಳಗಳನ್ನು ಮರುನಾಮಕರಣ ಮಾಡಲಾಗಿದೆ – ಫೈಜಾಬಾದ್ ಅಯೋಧ್ಯೆ, ಅಲಹಾಬಾದ್ ಪ್ರಯಾಗ್ರಾಜ್ ಮತ್ತು ಮೊಘಲ್ಸರಾಯ್ ರೈಲ್ವೆ ಜಂಕ್ಷನ್ ಅನ್ನು ಈಗ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಕರೆಯಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.