ನವದೆಹಲಿ: ನೀತಿ ಆಯೋಗ ಇಂದು ಬಿದಿರು ಅಭಿವೃದ್ಧಿ ಕುರಿತು ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿದೆ.
ನೀತಿ ಆಯೋಗದ ಉಪಾಧ್ಯಕ್ಷ ಡಾ. ರಾಜೀವ್ ಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್, ನೀತಿ ಆಯೋಗದ ಸದಸ್ಯ ಡಾ. ವಿ.ಕೆ ಸಾರಸ್ವತ್ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಕಾಂತ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ.
ಬಿದಿರು ವಲಯದಲ್ಲಿನ ಅವಕಾಶಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಾಗಾರ ಮಹತ್ವ ಪಡೆದುಕೊಂಡಿದೆ. ಭಾರತ ಮತ್ತು ವಿದೇಶದಿಂದ ಹಲವಾರು ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದಾರೆ.
ಬಿದಿರಿನ ವಲಯದ ಸಂಪೂರ್ಣ ಮೌಲ್ಯ ಸರಪಳಿಯಲ್ಲಿ ಕಾಣೆಯಾದ ಸಂಪರ್ಕಗಳನ್ನು ಅನ್ವೇಷಿಸಲು ಮತ್ತು ಅದಕ್ಕೆ ಅನುಗುಣವಾಗಿ ಕಾರ್ಯತಂತ್ರಗಳನ್ನು ಅಭಿವೃದ್ಧಿಪಡಿಸಲು ಮತ್ತು ಬಿದಿರು ವಲಯಕ್ಕೆ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಬಿದಿರಿನ ಬಳಕೆ ಮತ್ತು ವಾಣಿಜ್ಯೀಕರಣವನ್ನು ಹೆಚ್ಚಿಸಲು, ನೀತಿ ಆಯೋಗವು ಭಾರತೀಯ ಬಿದಿರು ಉದ್ಯಮದ ಸಮಗ್ರ ಅಭಿವೃದ್ಧಿಗಾಗಿ ಪ್ರಾಯೋಗಿಕ ನೀತಿಗಳು/ತಂತ್ರಜ್ಞಾನಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಹೇಳಿಕೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.