ನವದೆಹಲಿ: ಭಾರತದ ಜವಳಿ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಐದು ವರ್ಷಗಳ ಅವಧಿಯಲ್ಲಿ 1,683 ಕೋಟಿ ರೂಪಾಯಿಗಳ ಅನುಮೋದಿತ ವೆಚ್ಚದೊಂದಿಗೆ ಜವಳಿಗಾಗಿ ಉತ್ಪಾದನೆ ಆಧಾರಿತ ಪ್ರೋತ್ಸಾಹಕ ಯೋಜನೆ (ಪಿಎಲ್ಐ) ಗೆ ಸರ್ಕಾರ ಅನುಮೋದನೆ ನೀಡಿದೆ.
ದೇಶದಲ್ಲಿ ಮಾನವ ನಿರ್ಮಿತ ಫೈಬರ್ ಉಡುಪುಗಳು, ಮಾನವ ನಿರ್ಮಿತ ಬಟ್ಟೆಗಳು ಮತ್ತು ತಾಂತ್ರಿಕ ಜವಳಿ ಉತ್ಪನ್ನಗಳ ಉತ್ಪಾದನೆಯನ್ನು ಉತ್ತೇಜಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಈ ನಿಟ್ಟಿನಲ್ಲಿ, ಪಿಎಲ್ಐ ಯೋಜನೆಗೆ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗಿದೆ.
ಜವಳಿ ಸಚಿವಾಲಯವು ಪಿಎಲ್ಐ ಪೋರ್ಟಲ್ ಮೂಲಕ ಜನವರಿ 1 ರಿಂದ ಜವಳಿಗಾಗಿ ಪಿಎಲ್ಐ ಯೋಜನೆಯಡಿ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸಲಿದೆ.
ಪಿಎಲ್ಐ ಪೋರ್ಟಲ್ https://pli.texmin.gov.in/mainapp/Default ನಲ್ಲಿ ಅರ್ಜಿ ಸಲ್ಲಿಸಬಹುದು.
ಜನವರಿ 1 ರಿಂದ 31 ರವರೆಗೆ ಅಪ್ಲಿಕೇಶನ್ ವಿಂಡೋ ತೆರೆದಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.