ನವದೆಹಲಿ: ಚೀನಾವು ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಹೆಸರನ್ನು ಚೀನಿ ಭಾಷೆಯಲ್ಲಿ ಮರು ನಾಮಕರಣ ಮಾಡಿದೆ ಎಂದು ವರದಿಗಳು ತಿಳಿಸಿವೆ. ಈ ಕೃತ್ಯಕ್ಕೆ ಪ್ರತ್ಯುತ್ತರ ನೀಡಿರುವ ಭಾರತ, ಅರುಣಾಚಲ ಪ್ರದೇಶದ ಭಾರತದ ಅವಿಭಾಜ್ಯ ಅಂಗ, ಆವಿಷ್ಕರಿಸಿ ಹೆಸರುಗಳನ್ನು ಇಡುವುದರಿಂದ ಈ ಸತ್ಯ ಬದಲಾಗುವುದಿಲ್ಲ ಎಂದಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿ, ಅರುಣಾಚಲ ಪ್ರದೇಶದ ಸ್ಥಳಗಳಿಗೆ ಆವಿಷ್ಕರಿಸಿದ ಹೆಸರುಗಳನ್ನು ಇಡುವುದರಿಂದ ಆ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬ ಸತ್ಯ ಬದಲಾಗುವುದಿಲ್ಲ ಎಂದು ಹೇಳಿದೆ.
ಚೀನಾವು ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ತನ್ನದೇ ಭಾಷೆಯಲ್ಲಿ ಮರುನಾಮಕರಣ ಮಾಡಿದೆ ಎಂಬ ವರದಿಗಳ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ನಾವು ಇಂತಹ ವರದಿಗಳನ್ನು ನೋಡಿದ್ದೇವೆ. ಚೀನಾ ಅರುಣಾಚಲ ಪ್ರದೇಶ ರಾಜ್ಯದ ಸ್ಥಳಗಳಿಗೆ ಮರುನಾಮಕರಣ ಮಾಡಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ” ಎಂದಿದೆ.
“ಚೀನಾ ಏಪ್ರಿಲ್ 2017 ರಲ್ಲೂ ಇಂತಹ ಹೆಸರುಗಳನ್ನು ಇಡಲು ಪ್ರಯತ್ನಿಸಿದೆ” ಎಂದು ಅವರು ಹೇಳಿದ್ದಾರೆ.
“ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಆವಿಷ್ಕರಿಸಿದ ಹೆಸರುಗಳನ್ನು ಇಡುವುದರಿಂದ ಈ ಸತ್ಯವನ್ನು ಬದಲಾಯಿಸುವುದಿಲ್ಲ” ಎಂದು ವಿದೇಶಾಂಗ ವಕ್ತಾರರು ಹೇಳಿದ್ದಾರೆ.
ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಡಿಸೆಂಬರ್ 29 ರಂದು ಚೀನೀ ಅಕ್ಷರಗಳು, ಟಿಬೆಟಿಯನ್ ಮತ್ತು ರೋಮನ್ ವರ್ಣಮಾಲೆಯಲ್ಲಿ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಹೆಸರನ್ನು ಮರುನಾಮಕರಣ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಚೀನಾ ಪ್ರತಿಪಾದಿಸುತ್ತದೆ, ಇದನ್ನು ಭಾರತದ ವಿದೇಶಾಂಗ ಸಚಿವಾಲಯವು ದೃಢವಾಗಿ ತಿರಸ್ಕರಿಸಿದ್ದು, ಅರುಣಾಚಲಪ್ರದೇಶ “ಭಾರತದ ಬೇರ್ಪಡಿಸಲಾಗದ ಭಾಗ” ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.