ನವದೆಹಲಿ: ಕೇಂದ್ರದ ನೂತನ ಗೃಹ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ರಾಜೀವ್ ಮೆಹಶ್ರಿಯವರು ಸೋಮವಾರ ನೇಮಕಗೊಂಡಿದ್ದಾರೆ.
ಆರು ತಿಂಗಳ ಹಿಂದೆಯಷ್ಟೇ ಎಲ್ಸಿ ಗೋಯಲ್ ಅವರನ್ನು ಗೃಹಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆದರೀಗ ಅವರ ಜಾಗಕ್ಕೆ ಏಕಾಏಕಿ ಮೆಹಶ್ರಿ ನೇಮಕಗೊಂಡಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ.
ಗೋಯಲ್ ಅವರು ವೈಯಕ್ತಿಕ ಕಾರಣಗಳಿಗಾಗಿ ಸ್ವಯಂ ನಿವೃತ್ತಿಗೆ ಮನವಿ ಮಾಡಿದ್ದರು, ಅವರ ಮನವಿಯನ್ನು ಪ್ರಧಾನಿ ನರೇಂದ್ರ ಮೋದಿ ಪುರಸ್ಕರಿಸಿದ್ದಾರೆ ಎಂದು ಸರ್ಕಾರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಮೆಹಶ್ರಿಯವರು 1978ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ, ಆರ್ಥಿಕ ವ್ಯವಹಾರ ಮತ್ತು ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಇಂದು ಅವರು ನಿವೃತ್ತರಾಗಬೇಕಿತ್ತು ಆದರೆ ಅವರ ಸೇವಾ ಅವಧಿಯನ್ನು ಎರಡು ವರ್ಷ ವಿಸ್ತರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.