ನವದೆಹಲಿ: 26 ದೇಶಗಳ ವಿಶ್ವ ನಾಯಕರ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 10 ರಂದು ಗಾಂಧಿನಗರದಲ್ಲಿ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ 2022 ಅನ್ನು ಉದ್ಘಾಟಿಸಲಿದ್ದಾರೆ.
ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಬೃಹತ್ ಕಾರ್ಯಕ್ರಮವು ಖ್ಯಾತ ಉದ್ಯಮಿಗಳು, ವಿಶ್ವ ನಾಯಕರು ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರ ಸಮ್ಮುಖದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅನ್ನು ಜನವರಿ 10 ರಿಂದ 12 ರವರೆಗೆ ನಿಗದಿಪಡಿಸಲಾಗಿದೆ ಮತ್ತು ಇದು 26 ಪಾಲುದಾರ ರಾಷ್ಟ್ರಗಳು, 15 ವಿದೇಶಾಂಗ ಮಂತ್ರಿಗಳು ಮತ್ತು 4 ವಿದೇಶಿ ಗವರ್ನರ್ಗಳೊಂದಿಗೆ ಹೊಸ ಮಾನದಂಡವನ್ನು ಹೊಂದಿಸುವ ನಿರೀಕ್ಷೆಯಿದೆ.
10ನೇ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಸಮಿಟ್ನ ಥೀಮ್ ‘ಆತ್ಮನಿರ್ಭರ ಗುಜರಾತ್ನಿಂದ ಆತ್ಮನಿರ್ಭರ್ ಭಾರತದೆಡೆ’ ಎಂಬುದಾಗಿದೆ.
ಮೊದಲ ಬಾರಿಗೆ, ರಾಜ್ಯಗಳ ಮುಖ್ಯಸ್ಥರು, ಐದು ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರು ಮೆಗಾ ಈವೆಂಟ್ನಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್, ಮೊಜಾಂಬಿಕ್ ಅಧ್ಯಕ್ಷ ಫಿಲಿಪ್ ಜೆಸಿಂಟೊ ನ್ಯುಸಿ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್, ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಮತ್ತು ಸ್ಲೊವೇನಿಯಾದ ಪ್ರಧಾನಿ ಜಾನೆಜ್ ಜಾನ್ಸಾ ಸೇರಿದ್ದಾರೆ.
ಸಮಿಟ್ ಸಮಯದಲ್ಲಿ ‘ಗತಿ ಶಕ್ತಿ’ ಯೋಜನೆ, ‘ಆತ್ಮನಿರ್ಭರ ಭಾರತ’ ಮತ್ತು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್ಐ) ಯೋಜನೆಗಳಂತಹ ಕೇಂದ್ರ ಯೋಜನೆಗಳ ಬಗ್ಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.