ಬೆಂಗಳೂರು: ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆಯ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಯುವ ಪೀಳಿಗೆಯ ಸರ್ವಾಂಗೀಣ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ 2020ರ ಜನವರಿ 12 ರಿಂದ 2022ರ ಜನವರಿ 18ರವರೆಗೆ ರಾಜ್ಯಾದ್ಯಾಂತ ಯುವ ಸಪ್ತಾಹ ವನ್ನು ಆಚರಣೆ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮದ ಯುವಕರು ಮತ್ತು ವಿಶೇಷ ಚೇತನರನ್ನೊಳಗೊಂಡ ವಿಶೇಷ ಯುವ ಗ್ರಾಮ ಸಭೆಯನ್ನು ದಿನಾಂಕ ಜ.12 ರಂದು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.
ಈ ಯುವ ಸಪ್ತಾಹದಲ್ಲಿ ಚುನಾಯಿತ ಪ್ರತಿನಿಧಿಗಳಾದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಸದಸ್ಯರು ಕಡ್ಡಾಯವಾಗಿ ಪಾಲ್ಗೊಂಡು ಯುವ ಜನತೆಗೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.