ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಇಂದು ಒಂದು ಹೆಜ್ಜೆ ಮುಂದಕ್ಕೆ ಇಡುತ್ತಿದೆ. 15ರಿಂದ 18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಕೊರೋನಾದ ಮೂರನೇ ಅಲೆ ಅಪ್ಪಳಿಸುತ್ತಿರುವ ಸಂದರ್ಭದಲ್ಲಿ ಮಕ್ಕಳಿಗೆ ಲಸಿಕೆ ನೀಡಿಕೆ ಆರಂಭವಾಗಿರುವುದು ಮಹತ್ವದ ವಿಷಯವಾಗಿದೆ.
15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಮಾತ್ರ ನೀಡಲಾಗುತ್ತದೆ. 2007 ಅಥವಾ ಅದಕ್ಕಿಂತ ಮೊದಲು ಹುಟ್ಟಿದ ಎಲ್ಲರೂ ಲಸಿಕೆಗೆ ಅರ್ಹರಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 15-18 ವಯೋಮಾನದ ಸುಮಾರು 8 ಲಕ್ಷ ಫಲಾನುಭವಿಗಳು ಲಸಿಕೆಗಾಗಿ CoWIN ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಜನವರಿ 1 ರಂದು ಪ್ರಾರಂಭವಾಗಿದೆ.
ಕಳೆದ ವರ್ಷ ಜನವರಿ 16 ರಂದು ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಪ್ರಾರಂಭವಾದಾಗಿನಿಂದ ದೇಶವು ತನ್ನ ಅರ್ಹ ನಾಗರಿಕರಿಗೆ 1 ನೇ ಡೋಸ್ನ 90 ಪ್ರತಿಶತ ಮತ್ತು 2 ನೇ ಡೋಸ್ನ 65 ಪ್ರತಿಶತವನ್ನು ನೀಡಿದೆ.
ಕರ್ನಾಟಕದಲ್ಲೂ ಇಂದಿನಿಂದ 15- 18 ವಯೋಮಾನದ ಮಕ್ಕಳಿಗೆ ಲಸಿಕೆ ನೀಡಲು ಭರದ ಸಿದ್ಧತೆಗಳನ್ನು ಮಾಡಲಾಗಿದೆ. ವರದಿಗಳ ಪ್ರಕಾರ 32 ಲಕ್ಷ ಮಕ್ಕಳಿಗೆ ಲಸಿಕೆಯನ್ನು ಶಾಲಾ-ಕಾಲೇಜುಗಳಲ್ಲಿ ವಿತರಣೆ ಮಾಡಲಾಗುತ್ತದೆ. ಮೊದಲ ದಿನವೇ 4260 ಲಸಿಕ ಶಿಬಿರದಲ್ಲಿ 6 ಲಕ್ಷದಿಂದ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.