ಲಕ್ನೋ: ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಈಗಿನಿಂದಲೇ ಭಾರೀ ಕುತೂಹಲವನ್ನು ಹುಟ್ಟು ಹಾಕಿದೆ. ರಾಜಕೀಯವಾಗಿ ಎಲ್ಲಾ ಪಕ್ಷಗಳಿಗೂ ನಿರ್ಣಾಯಕವಾಗಿರುವ ಉತ್ತರಪ್ರದೇಶದಲ್ಲಿ ಈ ಬಾರಿ ಮತ್ತೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ.
ಟೈಮ್ಸ್ ನೌ-ನವಭಾರತ್ಗಾಗಿ ವಿಟೋ ನಡೆಸಿದ ಹೊಸ ಸಮೀಕ್ಷೆಯು, ಉತ್ತರಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂಬುದಾಗಿ ತಿಳಿಸಿದೆ.
ಬಿಜೆಪಿ ಮೈತ್ರಿಕೂಟ 403 ಸದಸ್ಯ ಬಲದ ವಿಧಾನಸಭೆಯಲ್ಲಿ 230-249 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಸಮೀಕ್ಷೆಯು ನುಡಿದ ಭವಿಷ್ಯದಂತೆ ಒಂದು ವೇಳೆ ಯೋಗಿ ಆದಿತ್ಯನಾಥ್ ಅವರ ಸರಕಾರ ಅಧಿಕಾರಕ್ಕೆ ಬಂದರೆ 1985ರ ಬಳಿಕ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ಮೊದಲ ಯುಪಿ ಮುಖ್ಯಮಂತ್ರಿ ಎಂಬ ಕೀರ್ತಿಗೆ ಯೋಗಿ ಪಾತ್ರರಾಗಲಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ನೇತೃತ್ವದ ಮೈತ್ರಿ ಕೂಟ 137-152 ಸ್ಥಾನಗಳನ್ನು ಪಡೆಯಲಿದೆ. ಬಹುಜನ ಸಮಾಜವಾದಿ ಪಕ್ಷ 9-14 ಸ್ಥಾನಗಳನ್ನು ಪಡೆಯಲಿದೆ, ಕಾಂಗ್ರೆಸ್ ಕೇವಲ ನಾಲ್ಕರಿಂದ ಏಳು ಸ್ಥಾನಗಳನ್ನು ಗೆಲ್ಲಲು ಮಾತ್ರ ಶಕ್ತವಾಗಲಿದೆ ಎಂದು ಸಮೀಕ್ಷೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.