ನವದೆಹಲಿ: ದೇಶದಲ್ಲಿ ಇದುವರೆಗೆ ಕೋವಿಡ್-19 ನ ಓಮಿಕ್ರಾನ್ ರೂಪಾಂತರದ ಒಟ್ಟು 1,700 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 639 ರೋಗಿಗಳು ಈಗಾಗಲೇ ಚೇತರಿಸಿಕೊಂಡಿದ್ದಾರೆ.
ಮಹಾರಾಷ್ಟ್ರದಿಂದ ಗರಿಷ್ಠ 510 ಪ್ರಕರಣಗಳು ವರದಿಯಾಗಿವೆ, ನಂತರ ದೆಹಲಿಯಲ್ಲಿ 351 ಪ್ರಕರಣಗಳು ವರದಿಯಾಗಿವೆ. 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಲ್ಲಿ ಇದುವರೆಗೆ 145 ಕೋಟಿ 68 ಲಕ್ಷಕ್ಕೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ನಿನ್ನೆ 23 ಲಕ್ಷ 30 ಸಾವಿರ ಡೋಸ್ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 33,750 ಹೊಸ ಪ್ರಕರಣಗಳು ವರದಿಯಾಗಿವೆ. ಸದ್ಯಕ್ಕೆ ಚೇತರಿಕೆ ಪ್ರಮಾಣ ಶೇ 98.20 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಅದೇ ಅವಧಿಯಲ್ಲಿ 123 ಸಾವುಗಳು ವರದಿಯಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.