ಕಾಶ್ಮೀರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚಂದಗಾಮ್ ಗ್ರಾಮದಲ್ಲಿ ಬುಧವಾರ ಮುಂಜಾನೆ ಎನ್ಕೌಂಟರ್ ನಡೆದಿದ್ದು, ಕನಿಷ್ಠ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಈ ಬಗ್ಗ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿರುವ ಕಾಶ್ಮೀರ ಐಜಿಪಿ ವಿಜಯ್ ಕುಮಾರ್, “ಪುಲ್ವಾಮಾದ ಚಂದಗಾಮ್ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ 3 ಜೆಇಎಂ ಭಯೋತ್ಪಾದಕರು ಹತರಾಗಿದ್ದಾರೆ. ಅವರಲ್ಲಿ ಒಬ್ಬ ಪಾಕಿಸ್ತಾನಿ ಪ್ರಜೆ. 2 M-4 ಕಾರ್ಬೈನ್ಗಳು ಸೇರಿದಂತೆ ಹಲವು ಅಪಾಯಕಾರಿ ವಸ್ತುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು, 1 ಎಕೆ ಸರಣಿಯ ರೈಫಲ್ ವಶಪಡಿಸಿಕೊಳ್ಳಲಾಗಿದೆ” ಎಂದಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಈ ಹಿಂದೆ ಟ್ವೀಟ್ ಮಾಡಿ, “ಪುಲ್ವಾಮಾದ ಚಂದಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಲಾಗುವುದು” ಎಂದಿತ್ತು.
2022 ರ ಹೊಸ ವರ್ಷದ ಮೊದಲ ಐದು ದಿನಗಳಲ್ಲಿ ಇದು ಐದನೇ ಎನ್ಕೌಂಟರ್ ಆಗಿದೆ. ಕಾಶ್ಮೀರದಲ್ಲಿ ಕಳೆದ ನಾಲ್ಕು ಎನ್ಕೌಂಟರ್ಗಳಲ್ಲಿ, ಭದ್ರತಾ ಪಡೆಗಳು 5 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿವೆ. ಅವರಲ್ಲಿ 4 ಎಲ್ಇಟಿಗೆ ಸಂಬಂಧಿಸಿದ ಉಗ್ರರು.
J&K: An encounter is underway between security forces and terrorists in Chandgam area of Pulwama district. One terrorist has been killed in the operation, as per police.
(Visuals deferred by unspecified time) pic.twitter.com/uAZJwwpqTo
— ANI (@ANI) January 5, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.