ನವದೆಹಲಿ: ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪಶುಪತಿ ಕುಮಾರ್ ಪರಾಸ್ ಅವರು ನಿನ್ನೆ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಫಾರ್ಮಲೈಝೇಶನ್ ಆಫ್ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ ಯೋಜನೆಯಡಿಯ ‘ಒಂದು ಜಿಲ್ಲೆ-ಒಂದು ಉತ್ಪನ್ನ’ ದ ಭಾಗವಾಗಿ ಅಭಿವೃದ್ಧಿಪಡಿಸಿದ ಆರು ಉತ್ಪನ್ನಗಳ ಬ್ರ್ಯಾಂಡ್ಗಳನ್ನು ಬಿಡುಗಡೆ ಮಾಡಿದರು.
ಬಿಡುಗಡೆಗೊಂಡ ಉತ್ಪನ್ನಗಳೆಂದರೆ ಅಮೃತ್ ಫಾಲ್, ಕೋರಿ ಗೋಲ್ಡ್, ಕಾಶ್ಮೀರಿ ಮಂತ್ರ, ಮಧು ಮಂತ್ರ, ಸೋಮದಾನ ಮತ್ತು ಡಿಲ್ಲಿ ಬೇಕ್ಸ್ನ ಸಂಪೂರ್ಣ ಗೋಧಿ ಕುಕೀಸ್.
ಯೋಜನೆಯ ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್ ಘಟಕದ ಅಡಿಯಲ್ಲಿ ಆಯ್ದ ಒಂದು ಜಿಲ್ಲೆ ಒಂದು ಉತ್ಪನ್ನದ ಹತ್ತು ಬ್ರಾಂಡ್ಗಳನ್ನು ಅಭಿವೃದ್ಧಿಪಡಿಸಲು ಸಚಿವಾಲಯವು NAFED ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. NAFED ಪ್ರಕಾರ, ಉತ್ಪನ್ನದ ದೀರ್ಘಾವಧಿಯ ಬಾಳಿಕೆಯನ್ನಯ ಖಚಿತಪಡಿಸಿಕೊಳ್ಳಲು ಮತ್ತು ಅದನ್ನು ತಾಜಾವಾಗಿಡಲು ಎಲ್ಲಾ ಉತ್ಪನ್ನಗಳು ಅನನ್ಯ ಮತ್ತು ಆಕರ್ಷಕ ಪ್ಯಾಕೇಜಿಂಗ್ನಲ್ಲಿ ಹೊರತರಲಾಗಿದೆ.
ಪ್ರಧಾನ ಮಂತ್ರಿ ಫಾರ್ಮಲೈಝೇಶನ್ ಆಫ್ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ ಸ್ಕೀಮ್ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಇದು ಆಹಾರ ಸಂಸ್ಕರಣಾ ಉದ್ಯಮದ ಅಸಂಘಟಿತ ವಿಭಾಗದಲ್ಲಿ ಅಸ್ತಿತ್ವದಲ್ಲಿರುವ ವೈಯಕ್ತಿಕ ಸೂಕ್ಷ್ಮ ಉದ್ಯಮಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಮತ್ತು ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಗುಂಪುಗಳು, ಉತ್ಪಾದಕರ ಸಹಕಾರ ಸಂಘಗಳಿಗೆ ಅವುಗಳ ಸಂಪೂರ್ಣ ಮೌಲ್ಯ ಸರಪಳಿಗೆ ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.