ಫಿರೋಜ್ಪುರ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ಎಸಗಿರುವ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪಂಜಾಬ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಬುಧವಾರ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಚನ್ನಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಮರಿಂದರ್ ಹೇಳಿದ್ದಾರೆ.
ಹುಸೇನಿವಾಲಾ ಬಳಿ ರಸ್ತೆ ತಡೆಗೆ ತಮ್ಮ ಬೆಂಗಾವಲು ವಾಹನ ಸಿಕ್ಕಿಹಾಕಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮೋದಿ ಅವರು ಚುನಾವಣಾ ಕಣವಾಗಿರುವ ಪಂಜಾಬ್ ರಾಜ್ಯದಲ್ಲಿ ಸಮಾವೇಶನ್ನುದ್ದೇಶಿಸಿ ಮಾತನಾಡದೆ ಹಿಂದಿರುಗಿದ್ದಾರೆ.
‘ನಾವು ನಮ್ಮ ರಾಜ್ಯವನ್ನು ಸುರಕ್ಷಿತವಾಗಿರಿಸಲು ಮತ್ತು ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕಾದರೆ, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರೀಂದರ್ ಇಲ್ಲಿ ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಾಂಗ್ರೆಸ್ ತೊರೆದು ಸ್ವಂತ ಪಕ್ಷ ಸ್ಥಾಪಿಸಿರುವ ಅಮರಿಂದರ್ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.