ನವದೆಹಲಿ: ಟಾಟಾ ಎಂಡಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸಹಭಾಗಿತ್ವದಲ್ಲಿ ಹೊಸ ಕೊರೋನಾವೈರಸ್ ರೂಪಾಂತರವಾದ ಓಮಿಕ್ರಾನ್ ಅನ್ನು ಪತ್ತೆಹಚ್ಚಲು ಆರ್ಟಿ-ಪಿಸಿಆರ್ ಪರೀಕ್ಷಾ ಕಿಟ್ ಅನ್ನು ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿದೆ.
ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಐಸಿಎಂಆರ್ ಮಹಾನಿರ್ದೇಶಕ ಡಾ.ಬಲರಾಮ್ ಭಾರ್ಗವ ಅವರು, ಪರೀಕ್ಷಾ ಕಿಟ್ ಅನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದಿಸಿದೆ. ಈ ಕಿಟ್ ಪರೀಕ್ಷೆಯು ನಾಲ್ಕು ಗಂಟೆಗಳಲ್ಲಿ ಫಲಿತಾಂಶವನ್ನು ನೀಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಓಮಿಕ್ರಾನ್ ದೇಶದಲ್ಲಿ ಪ್ರಧಾನವಾಗಿ ಹರಡುವ ಮಾಡುವ ತಳಿಯಾಗಿದೆ ಎಂದು ಡಾ ಭಾರ್ಗವ ಅವರು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ 2,135 ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ ಮತ್ತು ದೆಹಲಿ ನಂತರದ ಸ್ಥಾನದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.