ನವದೆಹಲಿ: ದೇಶದಲ್ಲಿ ಇದುವರೆಗೆ ಒಟ್ಟು 2630 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳಲ್ಲಿ ಮಹಾರಾಷ್ಟ್ರದಲ್ಲಿ 797, ದೆಹಲಿಯಲ್ಲಿ 465, ರಾಜಸ್ಥಾನದಲ್ಲಿ 236 ಮತ್ತು ಕೇರಳದಲ್ಲಿ 234 ಪ್ರಕರಣಗಳು ವರದಿಯಾಗಿವೆ. ಇದುವರೆಗೆ 995 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಅಡಿಯಲ್ಲಿ ಇದುವರೆಗೆ 148 ಕೋಟಿ 67 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ನಿನ್ನೆ 91 ಲಕ್ಷದ 25 ಸಾವಿರ ಡೋಸ್ ನೀಡಲಾಗಿತ್ತು.
ಭಾರತದ ಸಕ್ರಿಯ ಪ್ರಕರಣ ಪ್ರಸ್ತುತ 2, 85 , 401 ರಷ್ಟಿದೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ 1 ಪ್ರತಿಶತಕ್ಕಿಂತ ಕಡಿಮೆಯಿವೆ ಮತ್ತು ಇದು ಪ್ರಸ್ತುತ ಶೇಕಡಾ 0.81 ರಷ್ಟಿದೆ. ಚೇತರಿಕೆ ದರವು ಪ್ರಸ್ತುತ 97.81 ಪ್ರತಿಶತದಲ್ಲಿದೆ.
ಕಳೆದ 24 ಗಂಟೆಗಳಲ್ಲಿ 19 ಸಾವಿರಕ್ಕೂ ಹೆಚ್ಚು ಚೇತರಿಕೆಯಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 3 ಕೋಟಿ 43 ಲಕ್ಷ 41 ಸಾವಿರಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 90,928 ಹೊಸ ಪ್ರಕರಣಗಳು ವರದಿಯಾಗಿವೆ. ದೈನಂದಿನ ಪಾಸಿಟಿವಿಟಿ ದರವು 6.43 ಶೇಕಡಾ. ಸಾಪ್ತಾಹಿಕ ಪಾಸಿಟಿವಿಟಿ ದರವು 3.47 ಶೇಕಡಾ. ಕಳೆದ 24 ಗಂಟೆಗಳಲ್ಲಿ 325 ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದುವರೆಗೆ ಒಟ್ಟು 68 ಕೋಟಿ 38 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ. ನಿನ್ನೆ 14 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.