ನವದೆಹಲಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್ ಅವರು ನಿನ್ನೆ ರಾಷ್ಟ್ರೀಯ ವಿಜ್ಞಾನ ದಿನ 2022ರ ಥೀಮ್ ಅನ್ನು ಅನಾವರಣಗೊಳಿಸಿದರು. ‘ಸುಸ್ಥಿರ ಭವಿಷ್ಯಕ್ಕಾಗಿ ಎಸ್ & ಟಿಯಲ್ಲಿ ಸಂಯೋಜಿತ ವಿಧಾನ’ ಎಂಬುದು ಈ ಬಾರಿಯ ವಿಜ್ಞಾನ ದಿನದ ಥೀಮ್ ಆಗಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಒಳಗೊಂಡಿರುವ ವೈಜ್ಞಾನಿಕ ವಿಷಯಗಳ ಬಗ್ಗೆ ಸಾರ್ವಜನಿಕ ಮೆಚ್ಚುಗೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಷ್ಟ್ರೀಯ ವಿಜ್ಞಾನ ದಿನದ ಥೀಮ್ ಅನ್ನು ಆಯ್ಕೆ ಮಾಡಲಾಗಿದೆ.
ಭಾರತ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದಕ್ಕೆ ಪರಿಣಾಮಕಾರಿ ಪರಿಹಾರಗಳ ಕುರಿತು ಚರ್ಚಿಸಲು ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಜ್ಞಾನ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಒಳಗೊಂಡ ರಾಷ್ಟ್ರೀಯ ವಿಜ್ಞಾನ ಸಮಾವೇಶವನ್ನು ಮುಂಬರುವ ದಿನಗಳಲ್ಲಿ ಯೋಜಿಸುವುದಾಗಿ ಸಚಿವರು ಹೇಳಿದ್ದಾರೆ.
ಇಂಟಿಗ್ರೇಟೆಡ್ ಅಪ್ರೋಚ್ನ ಯಶಸ್ಸನ್ನು ಉಲ್ಲೇಖಿಸಿದ ಸಿಂಗ್, ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿ ಸೇರಿದಂತೆ ಎಲ್ಲಾ ಆರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗಳಿಂದ ವೈಜ್ಞಾನಿಕ ಅಪ್ಲಿಕೇಶನ್ಗಳು ಮತ್ತು ತಾಂತ್ರಿಕ ಬೆಂಬಲ ಮತ್ತು ಪರಿಹಾರಗಳಿಗಾಗಿ 33 ಸಚಿವಾಲಯಗಳು/ಇಲಾಖೆಗಳಿಂದ 168 ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಮನ್ ಎಫೆಕ್ಟ್’ನ ಆವಿಷ್ಕಾರದ ನೆನಪಿಗಾಗಿ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿವವನ್ನು ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.