ಶ್ರೀನಗರ: ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್-ಇ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಟ್ವೀಟ್ ಮಾಡಿ, “ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಅವರ ಗುರುತು ಮತ್ತು ಸಂಬಂಧವನ್ನು ಖಚಿತಪಡಿಸಲಾಗುತ್ತಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದಿದ್ದಾರೆ.
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು.
ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿ ಭದ್ರತಾ ಪಡೆಗಳು ಪ್ರವೇಶಿಸುತ್ತಿದ್ದಂತೆ ಎನ್ಕೌಂಟರ್ ಆರಂಭಗೊಂಡಿತು ಎನ್ನಲಾಗಿದೆ.
All the 03 killed #terrorists affiliated with terror outfit JeM . So far one identified as Waseem of #Srinagar City. 3 AK 56 rifles recovered. After killing of Waseem only 1 terrorist is Srinagar resident : IGP Kashmir@JmuKmrPolice https://t.co/gNJQwfZOHy
— Kashmir Zone Police (@KashmirPolice) January 7, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.