ನವದೆಹಲಿ: ಭಾರತವು ಇಂದು 150 ಕೋಟಿ ಕೋವಿಡ್-19 ಲಸಿಕೆ ಡೋಸ್ಗಳ ಹೆಗ್ಗುರುತನ್ನು ತಲುಪುವ ಮೂಲಕ ಇತಿಹಾಸವನ್ನು ಬರೆದಿದೆ. ಈ ಗಮನಾರ್ಹ ಸಾಧನೆಯನ್ನು ಒಂದು ವರ್ಷದೊಳಗೆ ಸಾಧಿಸಲಾಗಿದೆ. ಕಳೆದ ವರ್ಷ ಜನವರಿ 16 ರಂದು ರಾಷ್ಟ್ರೀಯ ಕೋವಿಡ್ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ದೇಶವು ತನ್ನ ಅರ್ಹ ನಾಗರಿಕರಿಗೆ 90% 1 ನೇ ಡೋಸ್ ಮತ್ತು 65% ಎರಡನೇ ಡೋಸ್ ನೀಡಿದೆ ಎಂದು ವರದಿ ತಿಳಿಸಿದೆ.
ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದ ಅಡಿಯಲ್ಲಿ ಕಳೆದ ವರ್ಷ ಅಕ್ಟೋಬರ್ 21 ರಂದು ಕೇವಲ 279 ದಿನಗಳಲ್ಲಿ 100 ಕೋಟಿ ಲಸಿಕಾ ವ್ಯಾಪ್ತಿಯನ್ನು ಸಾಧಿಸಲಾಗಿತ್ತು.
ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ, ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಬೆಂಬಲ ನೀಡುತ್ತಿದೆ. ಎಲ್ಲಾ ನಾಗರಿಕರು ತಮ್ಮ ಆದಾಯದ ಸ್ಥಿತಿಯನ್ನು ಲೆಕ್ಕಿಸದೆ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತ ಕೋವಿಡ್-19 ಲಸಿಕೆ ಪಡೆಯಲು ಅರ್ಹರಾಗಿದ್ದಾರೆ.
150 ಕೋಟಿ ಕೋವಿಡ್-19 ಲಸಿಕೆ ಡೋಸ್ಗಳನ್ನು ನೀಡುವ ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನು ಅಭಿನಂದಿಸಿದ್ದಾರೆ. ಹೊಸ ವರ್ಷದ ಮೊದಲ ತಿಂಗಳ ಮೊದಲ ವಾರದಲ್ಲಿ ಭಾರತವು 150 ಕೋಟಿ ಕೋವಿಡ್- 19 ಲಸಿಕೆ ಡೋಸ್ಗಳನ್ನು ನೀಡುವ ಐತಿಹಾಸಿಕ ಹೆಗ್ಗುರುತನ್ನು ಸಾಧಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದು ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯನ್ನು ಸೂಚಿಸುವ ಭಾರತದ ಹೊಸ ನಿರ್ಣಯದ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಾಧನೆಗಾಗಿ ವಿಜ್ಞಾನಿಗಳು, ಲಸಿಕೆ ತಯಾರಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಪ್ರಧಾನಮಂತ್ರಿ ಧನ್ಯವಾದ ಅರ್ಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.