ನವದೆಹಲಿ: 20 ಕೋಟಿ ಅಸಂಘಟಿತ ವಲಯದ ಕಾರ್ಮಿಕರು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಈ ಸಾಧನೆಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.
ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ರಚಿಸುವ ಉದ್ದೇಶದಿಂದ ಕಳೆದ ವರ್ಷ ಆಗಸ್ಟ್ 26 ರಂದು eSHRAM ಪೋರ್ಟಲ್ ಅನ್ನು ಪ್ರಾರಂಭಿಸಲಾಯಿತು.
ವಲಸೆ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಅರೆಕಾಲಿಕ ಕೆಲಸಗಾರರು ಸೇರಿದಂತೆ ಅಸಂಘಟಿತ ಕಾರ್ಮಿಕರ ಮೊದಲ ರಾಷ್ಟ್ರೀಯ ದತ್ತಾಂಶ ಸಂಚಯ ಈ ಪೋರ್ಟಲ್ ಆಗಿದೆ. ಇದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ವಲಯದ ಯೋಜನೆಗಳ ಪ್ರಯೋಜನಗಳನ್ನು ಒದಗಿಸಲು ಅನುಕೂಲ ಮಾಡಿಕೊಡುತ್ತದೆ.
ಈ ಪೋರ್ಟಲ್ ಆರಂಭಿಸಿರುವ ಮುಖ್ಯ ಉದ್ದೇಶವೆಂದರೆ ರಾಜ್ಯ ಹಾಗೂ ವ್ಯಾಪಾರ ಯೂನಿಯನ್ಗಳೊಂದಿಗೆ ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಮಿಕರಿಗೆ ಒದಗಿಸುವುದಾಗಿದೆ. ಈ ಹೊಸ ಅಧಿಕೃತ ಪೋರ್ಟಲ್ನಲ್ಲಿ ಕಾರ್ಮಿಕರ ನೋಂದಣಿ ಪ್ರಕ್ರಿಯೆಯನ್ನು ಕಾರ್ಮಿಕ ಸಚಿವಾಲಯ, ರಾಜ್ಯ ಸರ್ಕಾರಗಳು, ಕಾರ್ಮಿಕ ಸಂಘಗಳು ಮತ್ತು ಸಾಮಾನ್ಯ ಸೇವಾ ಕೇಂದ್ರಗಳು (ಸಿಎಸ್ಸಿ) ಸಂಯೋಜಿಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.