ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2021ರಲ್ಲಿ ದೇಶದ ಅತ್ಯಂತ ಜನಪ್ರಿಯ ಸೆಲೆಬ್ರಿಟಿಯಾಗಿದ್ದಾರೆ ಎಂದು ಜನವರಿ 6 ರಂದು ಬಿಡುಗಡೆಯಾದ ಸಮೀಕ್ಷೆಯು ತಿಳಿಸಿದೆ. ಸಮೀಕ್ಷೆಗೆ ಒಳಪಟ್ಟು ಶೇ. 40ರಷ್ಟು ಜನರು ತಮಗೆ ಮೋದಿ ಅತ್ಯಂತ ಪ್ರಿಯ ಸೆಲೆಬ್ರಿಟಿ ಎಂದಿದ್ದಾರೆ.
ಪ್ರಧಾನಿ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಜನಪ್ರಿಯ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ನಾಯಕರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕೂಡ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಪ್ರಮುಖ ಗ್ರಾಹಕ ಡೇಟಾ ಗುಪ್ತಚರ ಕಂಪನಿ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ತಿಳಿಸಿದೆ.
ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತರ ರಾಷ್ಟ್ರಗಳಿಗೆ ಲಸಿಕೆಗಳನ್ನು ರಫ್ತು ಮಾಡುವ ಬದಲು ಜನರಿಗೆ ಬೂಸ್ಟರ್ ಡೋಸ್ ನೀಡಲು ಬಹುಪಾಲು (82 ಪ್ರತಿಶತ) ಜನರು ಒಪ್ಪಿಕೊಂಡಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
“ವಿಶ್ವದ ನಾಯಕರ ಜನಪ್ರಿಯತೆ ಕ್ಷೀಣಿಸುತ್ತಿರುವ ಸಮಯದಲ್ಲಿ ಮೋದಿಯವರ ಜನಪ್ರಿಯತೆ ಬೆಳೆಯುತ್ತಿರುವಂತೆ ತೋರುತ್ತಿದೆ. ಈ ಸಮೀಕ್ಷೆಯು ದೇಶದ ನಾಡಿಮಿಡಿತದ ಮೇಲೆ ಮೋದಿಯವರ ಹಿಡಿತಕ್ಕೆ ಮತ್ತೊಂದು ಉದಾಹರಣೆ ಆಗಿದೆ” ಎಂದು ಗುಪ್ತಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.