ನವದೆಹಲಿ: ಭಾರತಕ್ಕೆ ಬರುವ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನಗಳ ಕಾಲ ಕಡ್ಡಾಯ ಹೋಮ್ ಕ್ವಾರಂಟೈನ್ ಅನ್ನು ವಿಧಿಸಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಪ್ರಸ್ತುತ ದೇಶದಲ್ಲಿ ಕೋವಿಡ್ -19 ಹೊಸ ರೂಪಾಂತರ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕೋವಿಡ್ ಅಪಾಯದಲ್ಲಿರುವ ನಿರ್ದಿಷ್ಟ ದೇಶಗಳ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ ಕೂಡಲೇ ಕೋವಿಡ್ ಪರೀಕ್ಷೆಗಾಗಿ ತಮ್ಮ ಮಾದರಿಗಳನ್ನು ನೀಡಬೇಕು ಮತ್ತು ಹೊಸ ನಿಯಮಗಳ ಪ್ರಕಾರ ಅವರ ಪರೀಕ್ಷಾ ಫಲಿತಾಂಶ ಬಂದ ನಂತರವೇ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ.
ಕೊರೋನಾ ವೈರಸ್ ಮತ್ತು ಓಮಿಕ್ರಾನ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇರಳ ಸರ್ಕಾರ ಕೂಡ ವಿದೇಶದಿಂದ ಬರುವ ಎಲ್ಲರಿಗೂ ಒಂದು ವಾರ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲು ನಿರ್ಧರಿಸಿದೆ.
ಕೇರಳದಲ್ಲಿ ಇದುವರೆಗೆ 280 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ ಮತ್ತು ಕಡಿಮೆ ಅಪಾಯದ ದೇಶಗಳಿಂದ ಬಂದವರಿಂದ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.