ನವದೆಹಲಿ: ಪೂರ್ವ ಲಡಾಖ್ನಲ್ಲಿ ಉದ್ಭವಿಸಿರುವ ಗಡಿ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನವಾಗಿ ಭಾರತ ಮತ್ತು ಚೀನಾ ಜನವರಿ 12 ರಂದು 14 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಗಳನ್ನು ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ನಡೆದ ಘರ್ಷಣೆಯ ಬಳಿಕ ಸಮಸ್ಯೆಯನ್ನು ಬಗೆಹರಿಸಲು ರಡೂ ಕಡೆಯವರು ಇದುವರೆಗೆ 13 ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ. ಆದರೆ ಯಾವ ಮಾತುಕತೆಯೂ ಫಲಪ್ರದವಾಗಿಲ್ಲ.
ಪೂರ್ವ ಲಡಾಖ್ನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಭಾರತದ ಬದಿಯಲ್ಲಿರುವ ಚುಶುಲ್ ಗಡಿ ಬಿಂದುವಿನಲ್ಲಿ ಮಾತುಕತೆ ನಡೆಯುವ ನಿರೀಕ್ಷೆಯಿದೆ ಹೇಳಲಾಗಿದೆ. ಚೀನಾ ಬದಿಯ ಚುಶೂಲ್- ಮಾಲ್ಡೋ ಭಾಗದಲ್ಲಿ 13ನೇ ಸುತ್ತಿನ ಮಾತುಕತೆ ನಡೆದಿತ್ತು.
ದೆಪ್ಸಾಂಗ್ ಬಲ್ಜ್ ಮತ್ತು ಡೆಮ್ಚೋಕ್ನಲ್ಲಿನ ಸಮಸ್ಯೆಗಳ ಪರಿಹಾರ ಸೇರಿದಂತೆ ಉಳಿದ ಎಲ್ಲಾ ಘರ್ಷಣೆಯ ಭಾಗಗಳಲ್ಲಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಭಾರತದ ಕಡೆಯವರು ಒತ್ತಡ ಹೇರುವ ನಿರೀಕ್ಷೆಯಿದೆ.
India and China to hold 14th round of Corps Commander level talks on January 12 to resolve the ongoing stand-off on the Line of Actual Control (LAC): Govt Sources
— ANI (@ANI) January 8, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.