ನವದೆಹಲಿ: “100 ಹೊಸ ಸೈನಿಕ ಶಾಲೆಗಳ ಸ್ಥಾಪನೆಯು ಹೆಣ್ಣುಮಕ್ಕಳಿಗೆ ಸಶಸ್ತ್ರ ಪಡೆಗಳಿಗೆ ಸೇರಲು ಮತ್ತು ರಾಷ್ಟ್ರೀಯ ಭದ್ರತೆಗೆ ಕೊಡುಗೆ ನೀಡಲು ಅವಕಾಶವನ್ನು ಒದಗಿಸುತ್ತದೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಅವರು ಇಂದು ಸೈನಿಕ ಶಾಲೆಗಳ ವೆಬ್ನಾರ್ನ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸುವಲ್ಲಿ ಸರ್ಕಾರವು ನಂಬಿಕೆ ಇಟ್ಟಿದೆ ಮತ್ತು ಸೈನಿಕ ಶಾಲೆಗಳಲ್ಲಿ ಬಾಲಕಿಯರ ಪ್ರವೇಶದ ಹಾದಿಯನ್ನು ತೆರವುಗೊಳಿಸುವುದು ಮತ್ತು ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ಒದಗಿಸುವುದು ಸೇರಿದಂತೆ ಆ ದಿಕ್ಕಿನಲ್ಲಿ ಕ್ರಮಗಳ ಸರಣಿಯನ್ನು ತೆಗೆದುಕೊಳ್ಳಲಾಗಿದೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಹುಡುಗಿಯರನ್ನು ಉತ್ತೇಜಿಸುತ್ತದೆʼ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಕ್ಕಳ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಳೆದ ಆರು-ಏಳು ವರ್ಷಗಳಲ್ಲಿ ಸರ್ಕಾರವು ತೆಗೆದುಕೊಂಡ ಅನೇಕ ಪ್ರಮುಖ ನಿರ್ಧಾರಗಳಲ್ಲಿ ಸೈನಿಕ ಶಾಲೆಗಳ ವಿಸ್ತರಣೆಯ ಘೋಷಣೆಯು ಒಂದು ಎಂದರು.
ರಕ್ಷಣಾ ಮತ್ತು ಶಿಕ್ಷಣ ಸೈನಿಕ ಶಾಲೆಗಳ ವಿಲೀನವು ಮುಂದಿನ ದಿನಗಳಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಆಶಿಸಿದರು.
‘ಸೈನಿಕ’ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸೂಚಿಸಿದರೆ, ‘ಶಾಲೆ’ ಶಿಕ್ಷಣದ ಕೇಂದ್ರವಾಗಿದೆ, ಆದ್ದರಿಂದ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅವರು ಹೇಳಿದರು.
ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿರುವುದರಿಂದ ದೇಶದ ಯುವಕರಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವತ್ತ ಸರ್ಕಾರ ಗಮನಹರಿಸುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದರು. ವಿಶ್ವಸಂಸ್ಥೆಯು ಅಳವಡಿಸಿಕೊಂಡ 17 ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಗುಣಮಟ್ಟದ ಶಿಕ್ಷಣವು ನಾಲ್ಕನೆಯದು. ‘ಗುಣಮಟ್ಟದ ಶಿಕ್ಷಣ’ ಅಡಿಯಲ್ಲಿ ಹಲವಾರು ಇತರ ಗುರಿಗಳಿವೆ. ಈ ಗುರಿಗಳನ್ನು ಸಾಧಿಸುವುದು ನಮ್ಮ ಬಲವಾದ ರಾಜಕೀಯ ಬದ್ಧತೆಯಾಗಿದೆ. ಸರ್ವಶಿಕ್ಷಾ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನದಂತಹ ಹಲವಾರು ಯೋಜನೆಗಳನ್ನು ನಡೆಸಲಾಗುತ್ತಿದೆ. 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವುದು ಆ ದಿಕ್ಕಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.