ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ನವದೆಹಲಿಯಲ್ಲಿ ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ, ಗೋವಾ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.
ಉತ್ತರಾಖಂಡ ರಾಜ್ಯದ 70 ಕ್ಷೇತ್ರಗಳಿಗೆ ಚುನಾವಣೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಚುನಾವಣೆ ನಡೆಯುವ ಕ್ಷೇತ್ರಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.
ಉತ್ತರಪ್ರದೇಶದಲ್ಲಿ ಅಸೆಂಬ್ಲಿ ಚುನಾವಣೆ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದೆ. ಫಲಿತಾಂಶವು ಮಾರ್ಚ್ 10 ರಂದು ಹೊರಬೀಳಲಿದೆ.
ಗೋವಾದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ.ಘೋಷಣೆಯ ಪ್ರಕಾರ ರಾಜ್ಯದ ಎಲ್ಲಾ 40 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಮಣಿಪುರದಲ್ಲಿ 2022 ರ ವಿಧಾನಸಭಾ ಚುನಾವಣೆಯನ್ನು ಫೆಬ್ರವರಿ 27 ಮತ್ತು ಮಾರ್ಚ್ 3, 2022 ರಂದು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ.
ಪಂಜಾಬ್ ವಿಧಾನಸಭೆ ಚುನಾವಣೆ 2022 ಫೆಬ್ರವರಿ 14 ರಂದು 117 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಗೋವಾ ವಿಧಾನಸಭೆಯ ಅವಧಿ ಈ ವರ್ಷದ ಮಾರ್ಚ್ 15 ರಂದು, ಮಣಿಪುರ ವಿಧಾನಸಭೆ ಮಾರ್ಚ್ 19 ರಂದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಗಳು ಮಾರ್ಚ್ 23 ರಂದು ಮತ್ತು ಉತ್ತರ ಪ್ರದೇಶ ವಿಧಾನಸಭೆಯು ಈ ವರ್ಷ ಮೇ 14 ರಂದು ಕೊನೆಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.