ನವದೆಹಲಿ: ಕೋವಿಡ್- 19 ವಿರುದ್ಧ ಹೋರಾಡಲು ಆಯುರಾಕ್ಷಾ ಕಿಟ್ ಅನ್ನು ಬಳಸುವಂತೆ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಜನರಿಗೆ ಮನವಿ ಮಾಡಿದ್ದಾರೆ.
ಶನಿವಾರ ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋನಾವಾಲ್, ಈ ಕಿಟ್ 4 ಘಟಕಗಳನ್ನು ಒಳಗೊಂಡಿದೆ ಎಂದು ಹೇಳಿದರು.
ಇದರಲ್ಲಿ ಆರ್ಸೆನಿಕಂ ಆಲ್ಬಮ್ 30 ಸೇರಿದಂತೆ ಇತರ ಆಯುಷ್ ಉತ್ಪನ್ನಗಳಿದ್ದು, ವೈದ್ಯರೊಂದಿಗೆ ಸಮಾಲೋಚಿಸಿ ತೆಗೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಿಸಲು ಆರೋಗ್ಯ ಮತ್ತು ಆಯುಷ್ ಸಚಿವಾಲಯವು ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದ ಅವರು, ಯೋಗಾಭ್ಯಾಸದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ನಾಗರಿಕರು ನಿತ್ಯ ಯೋಗ ಮಾಡುವಂತೆ ಮನವಿ ಮಾಡಿದರು.
ಆಯುಷ್ ಸಚಿವಾಲಯವು ಜನವರಿ 14 ರಂದು ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ನಡೆಸಲಿದೆ ಎಂದು ಕೇಂದ್ರ ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.